ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ.
ಮುಂದಿನ ವರ್ಷ ಫೆಬ್ರವರಿ.10ರಿಂದ ಮಾರ್ಚ್ 10ರವರೆಗೆ ಪಂದ್ಯಗಳು ನಡೆಯಲಿವೆ. ಮಾರ್ಚ್.9ರಂದು ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಫೈನಲ್ ದಿನ ಏನಾದರು ಏರುಪೇರು ಆದರೆ ಮೀಸಲು ದಿನವನ್ನು ಕಾಯ್ದಿರಿಸಲಾಗಿದೆ.
ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಫೆ.20ರಂದು ಬಾಂಗ್ಲಾದೇಶದ ವಿರುದ್ಧವಾಗಿ ಆಡಲಿದೆ. ನಂತರ ಫೆಬ್ರವರಿ.23ರಂದು ಪಾಕಿಸ್ತಾನ ಮತ್ತು ಭಾರತ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ. ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.
ಮಾರ್ಚ್.4ರಂದು ದುಬೈನಲ್ಲಿ ಮೊದಲ ಸೆಮಿಫೈನಲ್, ಮಾರ್ಚ್ 5ರಂದು 2ನೇ ಸೆಮಿಫೈನಲ್ ನಡೆಯಲಿದೆ. ಮಾರ್ಚ್.9ರಂದು ಫೈನಲ್ ಪಂದ್ಯ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತಕ್ಕೆ ಪಾಕಿಸ್ತಾನದಲ್ಲಿ ಆಡಲು ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಆದ್ದರಿಂದ ಐಸಿಸಿ ಚಾಂಪಿಯನ್ಸ್ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.
ಗುಂಪುಗಳು:
ಗುಂಪು ಎ: ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ
ಗುಂಪು ಬಿ: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್
ವೇಳಾಪಟ್ಟಿ:
ಫೆ.19: ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್, ಕರಾಚಿ
ಫೆ.20: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
ಫೆ.21: ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ, ನ್ಯಾಷನಲ್ ಸ್ಟೇಡಿಯಂ, ಕರಾಚಿ
ಫೆ.22: ಅಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್, ಗಡಾಫಿ ಸ್ಟೇಡಿಯಂ, ಲಾಹೋರ್
ಫೆ.23: ಪಾಕಿಸ್ತಾನ ವಿರುದ್ಧ ಭಾರತ, ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ
ಫೆ.24: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ಫೆ.25: ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ
ಫೆ.26: ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್, ಗಡಾಫಿ ಸ್ಟೇಡಿಯಂ, ಲಾಹೋರ್
ಫೆ.27: ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ, ರಾವಲ್ಪಿಂಟಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ಫೆ.28: ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ, ಗಡಾಫಿ ಕ್ರೀಡಾಂಗಣ, ಲಾಹೋರ್
ಮಾರ್ಚ್.1: ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ
ಮಾರ್ಚ್.2: ನ್ಯೂಜಿಲೆಂಡ್ ವಿರುದ್ಧ ಭಾರತ, ದುಬೈ ಅಂತರಾಷ್ಟ್ರೀ ಕ್ರಿಕೆಟ್ ಸ್ಟೇಡಿಯಂ, ದುಬೈ
ಮಾರ್ಚ್.4: ಮೊದಲ ಸೆಮಿಫೈನಲ್, ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ
ಮಾರ್ಚ್.5: ಎರಡನೇ ಸೆಮಿಫೈನಲ್, ಗಡಾಫಿ ಸ್ಟೇಡಿಯಂ, ಲಾಹೋರ್
ಮಾರ್ಚ್.9: ಫೈನಲ್, ಗಡಾಫಿ ಸ್ಟೇಡಿಯಂ, ಲಾಹೋರ್ (ಭಾರತ ಅರ್ಹತೆ ಪಡೆದರೆ)
ಮಾರ್ಚ್.10: ಮೀಸಲು ದಿನ
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…