ಕ್ರೀಡೆ

ICC ODI team of the year-2023: ರೋಹಿತ್‌, ಕೊಹ್ಲಿ ಸೇರಿದಂತೆ ಆರು ಭಾರತೀಯರಿಗೆ ಸ್ಥಾನ!

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌)ಯು ಇಂದು(ಮಂಗಳವಾರ) ವರ್ಷದ ಏಕದಿನ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಬರೋಬ್ಬರಿ ಆರು ಜನ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.

ವರ್ಷದ ತಂಡಕ್ಕೆ ನಾಯಕನಾಗಿ ರೋಹಿತ್‌ ಶರ್ಮಾ ನೇಮಕಗೊಂಡಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ರೋಹಿತ್‌ ನಾಯಕತ್ವದಲ್ಲಿ ಅಗಮ್ಯ ಸಾಧನೆ ತೋರಿತ್ತು. ಈ ಸಲುವಾಗಿ ವರ್ಷದ ಏಕದಿನ ತಂಡಕ್ಕೆ ರೋಹಿತ್‌ ನಾಯಕರಾಗಿದ್ದಾರೆ.

ಉಳಿದಂತೆ ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಮೊಹಮ್ಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಶಮಿ ತಂಡದಲ್ಲಿದ್ದಾರೆ. ನ್ಯೂಜಿಲೆಂಡ್ಸ್‌ನ ಆಲ್‌ರೌಂಡರ್‌ ಡೇರಿಯಲ್‌ ಮಿಚೆಲ್‌, ದಕ್ಷಿಣ ಆಫ್ರಿಕಾದ ವಿಕೇಟ್‌ ಕೀಪರ್‌ ಹೆನ್ರಿಚ್‌ ಕ್ಲಾಸೆನ್‌ ಮತ್ತು ಬೌಲರ್‌ ಮಾರ್ಕೋ ಎನ್ಸನ್‌, ಆಸೀಸ್‌ ತಂಡದ ಎಡಗೈ ದಾಂಡಿದ ಟ್ರಾವಿಸ್‌ ಹೆಡ್‌ ಮತ್ತು ಆಡಂ ಝಂಪಾ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾ (ನಾಯಕ): 2023 ರಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ರೊಹಿತ್ ಶರ್ಮಾ 52 ರ ಸರಾಸರಿಯಲ್ಲಿ ಒಟ್ಟು 1255 ರನ್ ಗಳಿಸುವ ಮೂಲಕ ತನ್ನ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದರು.

ಶುಭ್​ಮನ್ ಗಿಲ್: ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಶುಭ್​ಮನ್ ಗಿಲ್. ಒಟ್ಟು 1584 ರನ್​ ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ: 2023ರಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 1377 ರನ್ ಬಾರಿಸಿ ಹಲವು ದಾಖಲೆ ನಿರ್ಮಿಸಿದ್ದರು. ಸಚಿನ್‌ ಅವರ ಓಡಿಐ ಶತಕಗಳ ದಾಖಲೆಯನ್ನು ಸರಿಗಟ್ಟಿದ ಕೀರ್ತಿ ಕೊಹ್ಲಿಗೆ ದಕ್ಕಿದೆ

ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ಪರ ವೇಗಿ ಮೊಹಮ್ಮದ್ ಸಿರಾಜ್ ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 44 ವಿಕೆಟ್ ಕಬಳಿಸಿದ್ದರು.

ಕುಲ್ದೀಪ್ ಯಾದವ್: ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ 2023 ರಲ್ಲಿ ಒಟ್ಟು 49 ವಿಕೆಟ್ ಕಬಳಿಸಿ ಸ್ಪಿನ್ ಮೋಡಿ ಮಾಡಿದ್ದರು.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಸೆನ್ಸೇಷನ್ ವೇಗಿ ಮೊಹಮ್ಮದ್ ಶಮಿ ಕಳೆದ ವರ್ಷ ಒಟ್ಟು 43 ವಿಕೆಟ್ ಕಬಳಿಸಿದ್ದರು. 2023ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ 24 ವಿಕೆಟ್ ಪಡೆದು ದಾಖಲೆ ನಿರ್ಮಿಸಿದರು.

ಐಸಿಸಿ 2023ರ ಏಕದಿನ ತಂಡ ಹೀಗಿದೆ:
1- ರೋಹಿತ್ ಶರ್ಮಾ (ನಾಯಕ/ಭಾರತ)
2- ಶುಭ್​ಮನ್ ಗಿಲ್ (ಭಾರತ)
3- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)
4- ವಿರಾಟ್ ಕೊಹ್ಲಿ (ಭಾರತ)
5- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)
6- ಹೆನ್ರಿಕ್ ಕ್ಲಾಸೆನ್ (ಸೌತ್ ಆಫ್ರಿಕಾ)
7- ಮಾರ್ಕೊ ಯಾನ್ಸೆನ್ (ಸೌತ್ ಆಫ್ರಿಕಾ)
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ)
9- ಮೊಹಮ್ಮದ್ ಸಿರಾಜ್ (ಭಾರತ)
10- ಕುಲ್ದೀಪ್ ಯಾದವ್ (ಭಾರತ)
11- ಮೊಹಮ್ಮದ್ ಶಮಿ (ಭಾರತ)

andolanait

Recent Posts

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

9 mins ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

18 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

21 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

28 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago