ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವರ್ಷದ ಏಕದಿನ ಕ್ರಿಕೆಟ್ ತಂಡ 2024 ಅನ್ನು ಪ್ರಕಟಿಸಿದ್ದು, ಅಚ್ಚರಿಯೆಂಬಂತೆ ಈ ತಂಡದಲ್ಲಿ ಭಾರತ ತಂಡದ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಇನ್ನು ವರ್ಷದ ಪುರುಷರ ಏಕದಿನ ಕ್ರಿಕೆಟ್ ತಂಡದಲ್ಲಿ ನಾಲ್ವರು ಶ್ರೀಲಂಕಾ ಆಟಗಾರರು ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಈ ತಂಡದಲ್ಲಿ ಅಚ್ಚರಿಯೆಂಬಂತೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾದ ಯಾವೊಬ್ಬ ಆಟಗಾರರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಶ್ರೀಲಂಕಾದ ಚರೀತಾ ಅಸಲಂಕಾ ಈ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಇತ್ತ ಮಹಿಳೆಯರ ವರ್ಷದ ಏಕದಿನ ಕ್ರಿಕೆಟ್ ತಂಡ ಕೂಡ ಪ್ರಕಟಿಸಿದ್ದು, ಭಾರತ ತಂಡದ ಸ್ಮೃತಿ ಮಂದಾನ ಹಾಗೂ ದೀಪ್ತಿ ಶರ್ಮಾ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಐಸಿಸಿ ವರ್ಷದ ಏಕದಿನ ತಂಡ ಇಂತಿದೆ:
ಚಾರಿತ್ ಅಸಲಂಕಾ (ನಾಯಕ), ಸೈಯಮ್ ಆಯೂಬ್, ರಹಮನುಲ್ಲಾ ಗುರ್ಬಾಜ್, ಪಥುಮ್ ನಿಸ್ಸಾಂಕ, ಕುಶಾಲ್ ಮೆಂಡೀಸ್, ಶೆರ್ಫೇನ್ ರುದರ್ಫೋರ್ಡ್, ಅಜ್ಮತುಲ್ಲಾ ಒಮರ್ಜಾಯ್, ವನ್ನಿಂದು ಹಸರಂಗಾ, ಶಾಹಿನ್ ಶಾ ಆಫ್ರೀದಿ, ಹ್ಯಾರಿಸ್ ರೌಫ್, ಅಲ್ಲಾ ಮೊಹಮ್ಮದ್ ಘಜನ್ಫರ್.
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…