ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿತು.
ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತು. ಹರಿಣಗಳ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಪ್ರತ್ಯುತ್ತರವಾಗಿ ಟೀಂ ಇಂಡಿಯಾದ ರನ್ ಮೆಷಿನ್ ಬ್ಯಾಟ್ ಬೀಸಿದರು. ನಿಧಾನಗತಿಯಿಂದ ಇನ್ನಿಂಗ್ಸ್ ಕಟ್ಟಿದ ವಿರಾಟ್ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಇವರಿಗೆ ಶಿವಂ ದುಬೆ 27(16) ರನ್ ಬಾರಿಸಿ ಸಾಥ್ ನೀಡಿದರು.
ಉಳಿದಂತೆ ಅಕ್ಷರ್ ಪಟೇಲ್ 47(31) ರನ್, ನಾಯಕ ರೋಹಿತ್ ಶರ್ಮಾ 9(5) ರನ್, ರಿಷಭ್ ಪಂತ್ ಡಕ್‌ಔಟ್, ಸೂರ್ಯಕುಮಾರ್ ಯಾದವ್ 3(4)ರನ್, ಹಾರ್ದಿಕ್ ಪಾಂಡ್ಯ ಔಟಾಗದೇ 5(2) ರನ್, ರವೀಂದ್ರ ಜಡೇಜಾ 2(2) ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಹಾಗೂ ನೋಕಿಯೋ 2, ರಬಾಡ ಮತ್ತ ಮಾರ್ಕೋ ಎನ್ಸರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…