ಕ್ರೀಡೆ

ICC t20 worldcup 2024: ಅಫ್ಘಾನ್‌ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಬರೆದ ಕಮಿನ್ಸ್‌

ಸೇಂಟ್‌ ವಿನ್ಸೆಂಟ್‌: ಇಲ್ಲಿನ ಅರ್ನೋಸ್‌ ವೇಲ್‌ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಸೀಸ್‌ ತಂಡ ಮಾಜಿ ನಾಯಕ ಪ್ಯಾಟ್‌ ಕಮಿನ್ಸ್‌ ನೂತನ ವಿಶ್ವ ದಾಖಲೆ ನಿರ್ಮಿಸಿದರು.

ಟಿ20 ವಿಶ್ವಕಪ್‌ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗುವ ಮೂಲಕ ಪ್ಯಾಟ್‌ ಕಮಿನ್ಸ್‌ ನೂತನ ದಾಖಲೆ ರಚಿಸಿದರು.

ಟಿ20 ವಿಶ್ವಕಪ್‌ನಲ್ಲಿ ಈವರೆಗೆ ಒಟ್ಟು 7 ಜನರು ಮಾತ್ರ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ್ದಾರೆ. ಆದರೆ ಪ್ಯಾಟ್‌ ಕಮಿನ್ಸ್‌ ಮಾತ್ರ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಗೊಂಚಲು ಕಿತ್ತಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಮೊದಲ ಹ್ಯಾಟ್ರಿಕ್‌ ಪಡೆದಿದ್ದ ಕಮಿನ್ಸ್‌ ಬಳಿಕ ಇಂದು (ಜೂನ್..‌23) ರಂದು ನಡೆದ ಅಫ್ಘಾನ್‌ ಮತ್ತು ಆಸೀಸ್‌ ನಡುವಿನ ಪಂದ್ಯದಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದಾರೆ.

18ನೇ ಓವರ್‌ನ ಕೊನೆಯ ಎಸೆತದಲ್ಲಿ ಅಫ್ಘಾನ್‌ ನಾಯಕ ರಶೀದ್‌ ಖಾನ್‌ ಅವರನ್ನು ಔಟ್‌ ಮಾಡಿದರು. ಮತ್ತು 20ನೇ ಓವರ್‌ ಮೊದಲೆರೆಡು ಎಸೆತಗಳಲ್ಲಿ ಕರೀಮ್‌ ಜನ್ನತ್‌ ಹಾಗೂ ಗುಲ್ಬದೀನ್‌ ನೈಬ್‌ ಅವರನ್ನು ಪೆವಿಲಿಯನ್‌ನತ್ತ ಕಳುಹಿಸುವ ಮೂಲಕ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ 149ರನ್‌ ಗಳ ಗುರಿಯನ್ನು ಆಸೀಸ್‌ ತಂಡಕ್ಕೆ ನೀಡಿತು. ಇನ್ನು ಈ ಮೊತ್ತ ಬೆನ್ನತ್ತುವಲ್ಲಿ ವಿಫಲರಾದ ಆಸ್ಟ್ರೇಲಿಯಾ ಆಟಗಾರರು ಆಲ್ಔಟ್‌ ಆಗುವ ಮೂಲಕ ಕೇವಲ 127ರನ್‌ ಗಳಿಸಿ 21ರನ್‌ಗಳ ಅಂತರದಿಂದ ಸೋಲು ಕಂಡರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago