ಕ್ರೀಡೆ

ICC t20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಶಿವಂ ದುಬೆ, ಸಂಜುಗೆ ಸ್ಥಾನ!

ನವದೆಹಲಿ: ಇದೇ ಜೂನ್‌ ಒಂದರಿಂದ ಆರಂಭವಾಗಲಿರುವ ICC t20 worldcup ಟೂರ್ನಿಗೆ  ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಈ ಬಾರಿ ಅಚ್ಚರಿಯಂಬಂತೆ ಸಂಜು ಸ್ಯಾಮ್ಸನ್‌ ಹಾಗೂ ಸಿಎಸ್‌ಕೆ ತಡದ ಬಿಗ್‌ ಹಿಟ್ಟರ್‌ ಶಿವಂ ದುಬೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಈ ಟೂರ್ನಿಗೂ ಕೂಡಾ ರೋಹಿತ್‌ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಉಪ ನಾಯಕನಾಗಿ ಹಾರ್ದಿಕ್‌ ಪಾಂಡ್ಯ ನೇಮಕಗೊಂಡಿದ್ದಾರೆ. ಅಪಘಾತದಿಂದ ಹೊರಬಂದಿರುವ ವಿಕೇಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಆದರೆ ಕನ್ನಡಿಕ ಕೆ.ಎಲ್‌ ರಾಹುಲ್‌ ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ತಂಡದ ಸಾರಥ್ಯ ರೋಹಿತ್‌ ಶರ್ಮಾ ವಹಿಸಿದರೇ, ಇವರಿಗೆ ಜೊತೆಯಾಗಿ ಕನ್ನಡಿಗ ರಾಹುಲ್‌ ದ್ರಾವಿಡ್‌ ಹೆಡ್‌ ಕೋಚ್‌ ಆಗಿ ಇರಲಿದ್ದಾರೆ. ಕೋಚ್‌ ದ್ರಾವಿಡ್‌ ಹಾಗೂ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿ ಬಳಿಕ ತಂಡವನ್ನು ಅಂತಿಮಗೊಳಿಸಿದ್ದಾರೆ.

ಟೀ ಇಂಡಿಯಾ ತಂಡಕ್ಕೆ ಯಜುವೇಂದರ್‌ ಚಾಹಲ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ವಿಶ್ವಕಪ್‌ ನಂತರ ಯಾವುದೇ ಪಂದ್ಯಗಳನ್ನು ಆಡದ ಮೊಹಮದ್‌ ಶಮಿ ವಿಶ್ವಕಪ್‌ ಟೂರ್ನಿಗೂ ಅಲಭ್ಯರಾಗಿದ್ದಾರೆ.

ಒಟ್ಟು ಹದಿನೈದು ಆಟಗಾರರನ್ನೊಳಗೊಂಡ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿಗಳಿಗಿಂತ ಯುವಕರಿಗೆ ಹೆಚ್ಚಿನ ಮಣೆ ಹಾಕಲಾಗಿದೆ.

ಟೀಂ ಇಂಡಿಯಾ ತಂಡ ಇಂತಿದೆ: ರೋಹಿತ್‌ ಶರ್ಮಾ (ನಾಯಕ), ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಷಭ್‌ ಪಂತ್‌ (ವಿ.ಕೀ), ಶಿವಂ ದುಬೆ, ಸಂಜು ಸ್ಯಾಮ್ಸನ್‌ (ವಿ.ಕೀ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಅರ್ಷ್‌ದೀಪ್‌ ಸಿಂಗ್‌, ಕುಲ್ದೀಪ್‌ ಯಾದವ್‌, ಯಜುವೇಂದರ್‌ ಚಾಹಲ್‌, ಅಕ್ಷರ್‌ ಪಟೇಲ್‌, ಮೊಹಮದ್‌ ಸಿರಾಜ್‌

https://x.com/BCCI/status/1785250931166060585

ಬೆಂಚ್‌: ಶುಭ್‌ಮನ್‌ ಗಿಲ್‌, ರಿಂಕು ಸಿಂಗ್‌, ಖಲೀಲ್‌ ಅಹ್ಮದ್‌, ಆವೇಶ್‌ ಖಾನ್‌

ICC t20 ವಿಶ್ವಕಪ್‌ ಇದೇ ಜೂನ್‌ 1 ರಿಂದ ಆರಂಭವಾಗಲಿದ್ದು, ಈ ಟೂರ್ನಿ ಇದೇ ಜೂನ್‌ 29 ರಂದು ಅಂತ್ಯವಾಗಲಿದೆ. ಇನ್ನು ಟೀಂ ಇಂಡಿಯಾ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ ಪಂದ್ಯವಾಡುವ ಮೂಲಕ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ.

2013 ರಿಂದ ಆಚೆಗೆ ಟೀಂ ಇಂಡಿಯಾ ಈವರೆಗೆ ಯಾವುದೇ ಕಪ್‌ ಗೆದ್ದಿಲ್ಲ. 2023 ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ಪಂದ್ಯದಲ್ಲಿ ಆಸೀಸ್‌ ವಿರುದ್ಧ ತವರಿನಂಗಳದಲ್ಲಿ ಸೋತು ಮುಖಭಂಗ ಅನುಭವಿಸಿತ್ತು. ಈ ವಿಶ್ವಕಪ್‌ ಗೆದ್ದು, ಟ್ರೋಫಿ ಬರ ನೀಗಿಸಲಿದೆಯಾ ಟೀಂ ಇಂಡಿಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

13 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

15 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

17 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

20 hours ago