ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್ 2ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಈ ಬಾರಿಯ ವಿಶ್ವಕಪಪ್‌ನಲ್ಲಿ 20 ತಂಡಗಳು ಅಖಾಡಕ್ಕಿಳಿದಿವೆ.
20 ತಂಡಗಳ ಪೈಕಿ 4 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜೂನ್ 9ರಂದು ಸಾಂಪ್ರಾದಾಯಿಕ ವೈರಿಗಳ ಕಾದಾಟ ನಡೆಯಲಿದೆ.
ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಜೂನ್ 5ರಿಂದ ಆರಂಭಿಸಲಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಎದುರಿಸಲಿರುವ ತಂಡಗಳಾವುವು, ಸ್ಥಳ, ದಿನಾಂಕ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.
ವೇಳಾಪಟ್ಟಿ ಇಂತಿದೆ.
ಮೊದಲ ಪಂದ್ಯ: ಜೂನ್. 5- ಟೀಂ ಇಂಡಿಯಾ vs ಐರ್ಲೆಂಡ್
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.
ಎರಡನೇ ಪಂದ್ಯ: ಜೂನ್.9- ಟೀಂ ಇಂಡಿಯಾ vs ಪಾಕಿಸ್ತಾನ್
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.
ಮೂರನೇ ಪಂದ್ಯ: ಜೂನ್. 12- ಟೀಂ ಇಂಡಿಯಾ vs ಯುಎಸ್‌ಎ
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.
ನಾಲ್ಕನೇ ಪಂದ್ಯ: ಜೂನ್. 15- ಟೀಂ ಇಂಡಿಯಾ vs ಕೆನಡಾ
ಸ್ಥಳ: ಲಾಡರ್ಹಿಲ್ ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಕ್ರೀಡಾಂಗಣ
ನಾಕ್‌ಔಟ್ ಹಾಗೂ ಸೆಮಿ ಫೈನಲ್ ಹಾದಿ ಹೀಗಿದೆ: ಈ ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು, ಅವುಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕು ಗುಂಪುಗಳಲ್ಲಿ ಮೊದಲೆರೆಡು ಸ್ಥಾನ ಪಡೆವ ಎರಡು ತಂಡಗಳು ಸೂಪರ್-8 ಹಂತಕ್ಕೆ ತಲುಪಲಿವೆ. ಅಲ್ಲಿಂದ ಗೆದ್ದ ತಂಡಗಳು ಸೆಮಿಸ್‌ಗೆ ಅರ್ಹತೆ ಪಡೆಯಲಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…