ವೆಸ್ಟ್ ಇಂಡೀಸ್, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಕದನ ಜೂನ್.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಳೆದ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ಈ ಬಾರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಖಾಡಕ್ಕೆ ಇಳಿದಿದೆ. ಈ ಬಾರಿಯೂ ಪಾಕ್‌ಗೆ ಬಾಬರ ಅಜಂ ಸಾರಥ್ಯ ವಹಿಸಲಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಹಸನ್ ಅಲಿಗೆ ಟಿಕೆಟ್ ಕೈ ತಪ್ಪಿದರೇ ಅವರ ಬದಲಾಗಿ ಹ್ಯಾರಿಸ್ ರೌಫ್ ಅವರಿಗೆ ಪಾಕ್ ಕ್ರಿಕೆಟ್ ಮಂಡಳಿ ಮಣೆ ಹಾಕಿದೆ.
ಅಚ್ಚರಿಯಂಬತೆ ಈ ಟಿ20 ವಿಶ್ವಕಪ್‌ಗೆ ಪಾಕ್‌ನ ವೇಗಿ ಮೊಹಮ್ಮದ್ ಅಮೀರ್ ಅವರು ಕಂಬ್ಯಾಕ್ ಮಾಡಿದ್ದಾರೆ. ಇವರು ನಾಲ್ಕು ವರ್ಷಗಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಹಾಗಯೇ ಇನ್ನೊಬ್ಬ ಆಲ್‌ರೌಂಡ್ ಇಮಾದ್ ವಾಸಿಂ ಕೂಡಾ ಕಳೆದ ವರ್ಷ ನಿವೃತ್ತಿ ಘೋಷಿಸಿದ್ದರು. ಅವರನ್ನು ಸಹಾ ತಂಡಕ್ಕೆ ವಾಪಸ್ ಕರೆಸಲಾಗಿದೆ.
ಮತ್ತು ತಂಡದಲ್ಲಿ ಯುವ ಆಟಗಾರರಾದ ಉಸ್ಮಾನ್ ಖಾನ್, ಮಧ್ಯಮ ಕ್ರಮಾಂಕದ ಬ್ಯಾಟರ್ ಮಹಮ್ಮದ್ ಇರ್ಫಾನ್ ಖಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿ ಹೇಗಾದರೂ ಮಾಡಿ ಟೀಂ ಇಂಡಿಯಾವನ್ನು ಮಣಿಸಬೇಕು ಎಂಬ ಛಲದೊಂದಿಗೆ ಪಾಕ್ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ವಿಶ್ವಕಪ್‌ಗೆ ಕಳುಹಿಸಿದ್ದಾರೆ. ಟಿ20 ವಿಶ್ವಕಪ್‌ನ ಪಾಕ್-ಇಂಡಿಯಾ ಪಂದ್ಯ ಮಹತ್ವ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.
ಪಾಕ್ ಪ್ಲೇಯಿಂಗ್ 15 ಈ ಕೆಳಕಂಡಂತಿದೆ.
ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್(ವಿ.ಕೀ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ನಸೀಮ್ ಶಾ, ಸೈಮ್ ಆಯೂಬ್, ಶದಾಬ್ ಖಾನ್, ಶಾಹಿನ್ ಶಾ ಅಫ್ರಿದಿ, ಉಸ್ಮಾನ್ ಖಾನ್
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…