Mysore
28
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ICC t2o worldcup 2024: ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು(ಜೂನ್‌.29) ನಡೆಯಲಿರುವ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ದಕ್ಷಿಣಾ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಉತ್ತಮ ಲಯದಲ್ಲಿರುವ ಟೀಂ ಇಂಡಿಯಾಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇತ್ತಂಡಗಳು ಈವರೆಗೆ ಟೂರ್ನಿಯಲ್ಲಿ 8 ಪಂದ್ಯಗಳನ್ನು ಆಡಿದ್ದು, ಈವರೆಗೆ ಯಾವುದೇ ಒಂದು ಪಂದ್ಯವನ್ನು ಸೋತಿಲ್ಲ. ಈ ಕೊನೆಯ ಪಂದ್ಯ ಸೋಲುವ ತಂಡಕ್ಕೆ ಟೂರ್ನಿಯಲ್ಲಿ ಮೊದಲ ಸೋಲು ಹಾಗೂ ಟ್ರೋಫಿ ಕೈ ಬಿಟ್ಟು ಹೋಗಲಿದೆ.

2014 ರ ಬಳಿಕ ಇದೇ ಮೊದಲ ಬಾರಿಗೆ ಅಂದರೆ ದಶಕಗಳ ಬಳಿಕ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಫೈನಲ್‌ ಪ್ರವೇಶಿಸಿದೆ. ಇತ್ತ ತಮ್ಮ ಕ್ರಿಕೆಟ್‌ ಇತಿಹಾಸದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ತಂಡ ಫೈನಲ್‌ ತಲುಪಿದ್ದು, ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಆಡುವ ಹನ್ನೊಂದರ ಬಳಗ:

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿ.ಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನೋಕಿಯೋ, ತಬ್ರೈಜ್ ಶಮ್ಸಿ

Tags:
error: Content is protected !!