ಬೆಂಗಳೂರು: ದೀರ್ಘ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಬ್ಯಾಟರ್ಸ್ ಶ್ರೇಯಾಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಉಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ಮಾರ್ನಸ್ ಲಾಬುಶೇನ್ ಅವರನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಸಡ್ಡು ಹೊಡೆದಿದ್ದಾರೆ. 2023ರ ಸಾಲಿನ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಮನಮೋಹಕ ಶತಕ ಬಾರಿಸಿದ ಕ್ಲಾಸಿಕ್ ಬ್ಯಾಟರ್ ಜೋ ರೂಟ್, ಈಗ ನೂತನ ನಂ.1 ಬ್ಯಾಟ್ಸ್‌ಮನ್ ಅಗಿ ಹೊರಹೊಮ್ಮಿದ್ದಾರೆ. ಬರೋಬ್ಬರಿ 6 ತಿಂಗಳ ಬಳಿಕ ಮಾರ್ನಸ್ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.
ಎಡ್ಜ್‌ಬಾಸ್ಟನ್ ಅಂಗಣದಲ್ಲಿ ನಡೆದ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಅಜೇಯ 118 ರನ್ ಬಾರಿಸಿದ್ದ ಜೋ ರೂಟ್, ಎರಡನೇ ಇನಿಂಗ್ಸ್‌ನಲ್ಲೂ 46 ರನ್‌ಗಳ ಕೊಡುಗೆ ಕೊಟ್ಟರು. ಅವರ ಈ ಪ್ರದರ್ಶನದ ಬಲದಿಂದ ಶ್ರೇಯಾಂಕ ಪಟ್ಟಿಯಲ್ಲಿ 887 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಪಂದ್ಯದಲ್ಲಿ ಇಂಗ್ಲೆಂಡ್ 2 ವಿಕೆಟ್‌ಗಳ ವೀರೋಚಿತ ಸೋಲುಂಡಿತು.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಮಾರ್ನಸ್ ಲಾಬುಶೇನ್, ಪ್ರಥಮ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಡಕ್‌ಔಟ್ ಆದರೆ, ಎರಡನೇ ಇನಿಂಗ್ಸ್‌ನಲ್ಲಿ 13 ರನ್ ಗಳಿಸಿ ಔಟಾದರು. ಪರಿಣಾಮ ಶ್ರೇಯಾಂಕ ಪಟ್ಟಿಯುಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ 2ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.
ಆಸೀಸ್ ಪರ ಮೊದಲ ಇನಿಂಗ್ಸ್‌ನಲ್ಲಿ ಫಿಫ್ಟಿ ಬಾರಿಸಿದರೂ ಎಡಗೈ ಬ್ಯಾಟರ್ ಟ್ರಾವಿಸ್ ಹೆಡ್ 4ನೇ ಶ್ರೇಯಾಂಕಕ್ಕೆ ಜಾರಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಮ್ 5ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, 16 ಮತ್ತು 6 ರನ್ ಗಳಿಸಿದ ಪರಿಣಾಮ ಶ್ರೇಯಾಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಾರಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟರ್ಸ್ ಶ್ರೇಯಾಂಕ ಪಟ್ಟಿ (ಜೂನ್ 21, 2023)
01. ಜೋ ರೂಟ್ (ಇಂಗ್ಲೆಂಡ್) – 887 ಅಂಕಗಳು
02. ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್) – 883
03. ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ) – 877
04. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ) – 873
05. ಬಾಬರ್ ಆಜಮ್ (ಪಾಕಿಸ್ತಾನ) – 862
06. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ) – 861
07. ಉಸ್ಮಾನ್ ಖವಾಜಾ (ಆಸ್ಟ್ರೇಲಿಯಾ) – 836
08. ಡ್ಯಾರಿಲ್ ಮಿಚೆಲ್ (ನ್ಯೂಜಿಲೆಂಡ್) – 792
09. ದಿಮುತ್ ಕರುಣಾರತ್ನೆ (ಶ್ರೀಲಂಕಾ) – 780
10. ರಿಷಭ್ ಪಂತ್ (ಭಾರತ) – 758
ಇನ್ನು ಟೆಸ್ಟ್ ಶ್ರೇಯಾಂಕದ ಅಗ್ರ 10ರಲ್ಲಿ ಭಾರತ ತಂಡದ ಏಕಮಾತ್ರ ಬ್ಯಾಟರ್ ಆಗಿ ರಿಷಭ್ ಪಂತ್ ಉಳಿದುಕೊಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್ 29ರಂದು ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕಮ್‌ಬ್ಯಾಕ್ ಮಾಡಲು ಕನಿಷ್ಠ ಒಂದು ವರ್ಷ ಸಮಯವಾದರೂ ಬೇಕು. ವಿರಾಟ್ ಕೊಹ್ಲಿ 14ನೇ ಶ್ರೇಯಾಂಕದಲ್ಲಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…