Mysore
21
mist

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಐಸಿಸಿ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದ ಹಾರ್ದಿಕ್ ಪಾಂಡ್ಯ

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ.

ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ ನೀಡಲಾಗಿದ್ದು, ನ್ಯೂಜಿಲೆಂಡ್  ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ. ಆದರೆ ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

ಆಲ್‌ರೌಂಡರ್‌ಗೆ  ಸ್ಕ್ಯಾನ್‌ ಮಾಡಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ. ಅವರು ಬಿಸಿಸಿಐ ವೈದ್ಯಕೀಯ ತಂಡದ ನಿರಂತರ ನಿಗಾವಣೆಯಲ್ಲಿದ್ದು, ತಂಡದೊಂದಿಗೆ ಧರ್ಮಶಾಲಾಗೆ ತೆರಳುತ್ತಿಲ್ಲ.ಇಂಗ್ಲೆಂಡ್ ವಿರುದ್ಧ ಲಕ್ನೋದಲ್ಲಿ ನಡೆಯಲಿರುವ ತಂಡವನ್ನು ನೇರವಾಗಿ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಪಾಂಡ್ಯ ಆಗಮಿಸುತ್ತಿದ್ದು, ಇಂಗ್ಲೆಂಡ್‌ನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!