Mysore
22
broken clouds
Light
Dark

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ : ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್‌ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್‌ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 42.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು.

https://x.com/cricketworldcup/status/1712843494002221411?s=20

ನ್ಯೂಜಿಲೆಂಡ್‌ ಪರ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 78 ಹಾಗೂ ಮಿಚೆಲ್‌ 89 ರನ್‌ಗಳಿಸಿದರು.

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ