ಪೋರ್ಟ್ ಆಫ್ ಸ್ಪೈನ್ (ವೆಸ್ಟ್ ಇಂಡೀಸ್) : ಭಾರತೀಯ ಕ್ರಿಕೆಟ್‌ನ ಆಧುನಿಕ ದಿಗ್ಗಜ ವಿರಾಟ್ ಕೊಹ್ಲಿ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭಿಸಲು ಅವಕಾಶ ಸಿಕ್ಕಿರುವುದಕ್ಕೆ ಯಂಗ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಂತಸ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ದಂತಕತೆಯಾಗಿದ್ದು, ಅವರ ಜೊತೆ ಮೈದಾನ ಹಾಗೂ ಡ್ರೆಸ್ಸಿಂಗ್ ಕೊಠಡಿ ಹಂಚಿಕೊಳ್ಳಲು ನಾನು ಆಶೀರ್ವದಿಸಿದ್ದೇನೆಂದು ಹೇಳಿಕೊಂಡಿದ್ದಾರೆ.
ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಗುರುವಾರ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಆರಂಭಿಕ ದಿನ ಯಶಸ್ವಿ ಜೈಸ್ವಾಲ್ ಅವರು 57 ರನ್ ಗಳಿಸಿ ಮತ್ತೊಂದು ಶತಕ ಸಿಡಿಸುವ ಭರವಸೆ ಮೂಡಿಸಿದ್ದರು. ಆದರೆ, ಜೇಸನ್ ಹೋಲ್ಡರ್ ಎಸೆತದಲ್ಲಿ ಕ್ಯಾಚಿತ್ತು ನಿರಾಶೆಯೊಂದಿಗೆ ಪೆವಿಲಿಯನ್‌ಗೆ ಮರಳಿದರು. ಅಂತಿಮವಾಗಿ ಮೊದಲನೇ ದಿನ ದಾಟದ ಅಂತ್ಯಕ್ಕೆ ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 84 ಓವರ್‌ಗಳಿಗೆ 4 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ. ವಿರಾಟ್ ಕೊಹ್ಲಿ(87*) ಹಾಗೂ ರವಿಂದ್ರ ಜಡೇಜಾ (36*) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಮೊದಲನೇ ದಿನದಾಟದ ಅಂತ್ಯಕ್ಕೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಶಸ್ವಿ ಜೈಸ್ವಾಲ್, ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಮುಕ್ತಕಂಠದಿಂದ ಗುಣಗಾನ ಮಾಡಿದರು ಹಾಗೂ ಅವರ ಜೊತೆ ಆಡಲು ನಾನು ಆಶೀರ್ವದಿಸುತ್ತಿದ್ದೇನೆಂದು ತಿಳಿಸಿದ್ದಾರೆ.
“ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡುವುದು ಅದ್ಭುತವಾಗಿರುತ್ತದೆ. ಅವರ ಬಗ್ಗೆ ನಾನು ಏನು ಹೇಳಬೇಕು? ಅವರ ದಂತಕತೆ. ಅವರ ಜೊತೆ ಆಡಲು ನಾನು ಆಶೀರ್ವದಿಸಿದ್ದೇನೆ. ಕ್ರಿಕೆಟ್ ಹಾಗೂ ಅದರ ಹೊರಗಡೆಯಿಂದ ನಾನು ಅವರಿಂದ ಸಾಕಷ್ಟು ಕಲಿಯುತ್ತಿದ್ದೇನೆ. ಅವರ ಜ್ಞಾನವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ,” ಎಂದು ಯಶಸ್ವಿ ಜೈಸ್ವಾಲ್ ಹೇಳಿದ್ದಾರೆ.
ಡೊಮಿನಿಕಾದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿಯೇ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದ್ದರು. ಆ ಮೂಲಕ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಯಶಸ್ವಿ ಜೈಸ್ವಾಲ್ ಸೇರ್ಪಡೆಯಾಗಿದ್ದರು. ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಭಾರತೀಯ ಕ್ರಿಕೆಟ್‌ನ ದಿಗ್ಗಜರು ತಮ್ಮದೇ ಹಾದಿಯಲ್ಲಿ ಯಶಸ್ವಿಯಾಗಿದ್ದಾರೆ. ಈ ಎಲ್ಲಾ ದಿಗ್ಗಜರ ಸಲಹೆಗಳನ್ನು ಅನುಸರಿಸುತ್ತಿದ್ದೇನೆಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ತಮ್ಮದೇ ಧಾಟಿಯಲ್ಲಿ ವಿವರಣೆಯನ್ನು ನೀಡುತ್ತಾರೆ. ಅವರೆಲ್ಲರೂ ಅನುಭವಿಗಳು. ಇವರೆಲ್ಲರ ಸಲಹೆಗಳನ್ನು ನಾನು ಬಹಳ ಎಚ್ಚರಿಕೆಯಿಂದ ಕೇಳುತ್ತೇನೆ ಹಾಗೂ ಸ್ವೀಕರಿಸುತ್ತೇನೆ. ಅವರಿಂದ ತೆಗೆದುಕೊಳ್ಳುವ ಸಣ್ಣ-ಸಣ್ಣ ಸಂಗತಿಗಳು ನನ್ನ ಪ್ರದರ್ಶನದ ಮೇಲೆ ದೊಡ್ಡ ಪ್ರಭಾವವನ್ನು ಬೀರಬಹುದು,” ಎಂದು ಯಶಸ್ವಿ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎರಡನೇ ಶತಕ ವಂಚಿತ ಜೈಸ್ವಾಲ್: ಮೊದಲನೇ ಟೆಸ್ಟ್ ಪಂದ್ಯದಂತೆ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಯಶಸ್ವಿ ಜೈಸ್ವಾಲ್ ಅವರು ಶತಕ ಸಿಡಿಸುವ ಅವಕಾಶವಿತ್ತು. ಅದರಂತೆ ಅವರು 57 ರನ್ ಗಳಿಸುವ ಮೂಲಕ ಕ್ರೀಸ್‌ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದರು. ಆದರೆ, ಜೇಸನ್ ಹೋಲ್ಡರ್ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ ವಿಕೆಟ್ ಒಪ್ಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿ, “ಹೌದು ಶತಕ ವಂಚಿತನಾಗಿದ್ದಕ್ಕೆ ನನಗೆ ತುಂಬಾ ಬೇಸರವಾಯಿತು. ಈ ಎಲ್ಲಾ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ಪಂದ್ಯಕ್ಕೆ ಆಗಮಿಸಲು ಪ್ರಯತ್ನಿಸುತ್ತೇನೆ,” ಎಂದರು.
“ಸಾಧ್ಯವಾದಷ್ಟು ದೀರ್ಘಾವಧಿ ಬ್ಯಾಟ್ ಮಾಡಲು ಪ್ರಯತ್ನಿಸುತ್ತಿದ್ದೆ. ಆದರೆ, ವಿಕೆಟ್ ಒಪ್ಪಿಸಿದ ಬಳಿಕ ನನಗೆ ತುಂಬಾ ನಿರಾಶೆಯಾಯಿತು. ನಾನು ಇನ್ನಷ್ಟು ಕಲಿಯಬೇಕಾದ ಅಗತ್ಯವಿದೆ. ತಂಡಕ್ಕೋಸ್ಕರ ನಾನು ಯಾವಾಗಲೂ ಉತ್ತಮವಾದುದನ್ನು ನೀಡಲು ಬಯಸುತ್ತೇನೆ. ನನ್ನ ದೇಶದ ಪರ ಆಡುವುದು ಯಾವಾಗಲೂ ಹೆಮ್ಮೆ ಹಾಗೂ ಗೌರವವನ್ನು ತಂದುಕೊಡುತ್ತದೆ,” ಎಂದು ಯಶಸ್ವಿ ಜೈಸ್ವಾಲ್ ತಿಳಿಸಿದ್ದಾರೆ.
ವಕ್ಫ್ ನಲ್ಲಿ ಜಮೀನು ಲೂಟಿಯಾಗಿದ್ದರೆ ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಕೋಲಾರ: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ…
ಮಂಡ್ಯ: ಇಲ್ಲಿನ ಬೂದನೂರು ಗ್ರಾಮದ ಬಳಿ ಅನ್ಯಕ್ರಾಂತವಾಗದ ಜಮೀನಿನಲ್ಲಿ ಹುಕ್ಕಾ ಬಾರ್ ನಡೆಸಲು ಅನಧಿಕೃತ ಲೈಸೆನ್ಸ್ ನೀಡಿದ ಪಿಡಿಓ ವಿನಯ್‌ಕುಮಾರ್‌ನನ್ನು…
ಮಡಿಕೇರಿ: ಶನಿವಾರಸಂತೆಯ ವಿಜಯ ವಿನಾಯಕ ದೇವಾಲಯದಲ್ಲಿ ಭಾನುವಾರ ರಾತ್ರಿ ಬಾಗಿಲು ಮುರಿದು ದೇವಾಲಯದ ಒಳಗಡೆ ಇದ್ದ ಹುಂಡಿ ಹೊತ್ತು ಕಳ್ಳರು…
ಬೆಂಗಳೂರು: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಎಚ್‌ಎಸ್‌ಆರ್‌ಪಿ) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ…
ಮೈಸೂರು : ಸಾಂಸ್ಕೃತಿಕ ನಗರದಲ್ಲಿ ಇದೀಗ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು ಯುವತಿಯ ಸ್ನೇಹಿತರಿಬ್ಬರು ವಿಜಯನಗರದ ಖಾಸಗಿ ಹೋಟೆಲ್…
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆದ್ದರೆ ಚನ್ನಪಟ್ಟಣ ತಾಲೂಕಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.…