ಹೈದರಾಬಾದ್: ನ್ಯೂಜಿಲ್ಯಾಂಡ್ ವಿರುದ್ಧ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್(208, 149 ಎಸೆತ) ಅಬ್ಬರದ ದ್ವಿಶತಕ ಸಿಡಿಸಿದ್ದಾರೆ. 145 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಸಂಭ್ರಮಿಸಿದರು. ಈ ಸಾಧನೆ ಮಾಡಿದ ಅತ್ಯಂತ ಯುವ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತ್ತು. ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಬಾರಿಸಿದೆ. ಕೆಲ ದಿನಗಳ ಹಿಂದೆ ಮತ್ತೋರ್ವ ಯುವ ಆಟಗಾರ ಇಶಾನ್ ಕಿಶನ್ ಬಾಂಗ್ಲಾದೇಶದ ವಿರುದ್ಧ ಅತಿವೇಗದ ದ್ವಿಶತಕ ಬಾರಿಸಿ ದಾಖಲೆ ಬರೆದಿದ್ದರು.





