ಕ್ರೀಡೆ

IND V/S ENG ಟಿ20: ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ ಭಾರತ

ಚೆನ್ನೈ: ನಗರದ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ ಭಾರತ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಗಳಿಸಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿತು. ನಾಯಕ ಜೋಶ್‌ ಬಟ್ಲರ್‌ 45(30) ರನ್‌ ಪೇರಿಸುವ ಮೂಲಕ ಇಂಗ್ಲೆಂಡ್‌ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ನೆರವಾದರು.

ಟೀಂ ಇಂಡಿಯಾ ಪರ ಅಕ್ಷರ್‌ ಹಾಗೂ ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌ ಪಡೆದರೆ, ಉಳಿದವರು ಒಂದೊಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನತ್ತಿದ ಭಾರತ ತಂಡ, ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ 19.2 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಇಂಗ್ಲೆಂಡ್‌ ಇನ್ನಿಂಗ್ಸ್:‌ ಪಿಲ್‌ ಸಾಲ್ಟ್‌ 4, ಡಕೆಟ್‌ 3, ಜೋಸ್‌ ಬಟ್ಲರ್‌ 45, ಹ್ಯಾರಿ ಬ್ರೂಕ್‌ 13, ಲಿವಿಂಗ್‌ಸ್ಟೋನ್‌ 13, ಸ್ಮಿತ್‌ 22, ಜಾಮಿ ಓವರ್ಟನ್‌ 5, ಬ್ರಿಡನ್‌ ಕಾರ್ಸ್‌ 31, ಆರ್ಚರ್‌ 12, ಅದಿಲ್‌ ರಶೀದ್‌ 10, ಮಾರ್ಕ್‌ ವುಡ್‌ 5.

ಭಾರತದ ಪರ ವರುಣ್‌ ಚಕ್ರವರ್ತಿ ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಮತ್ತು ಅರ್ಷದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌ ಹಾಗೂ ಅಭಿಷೇಕ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್‌: ಸಂಜು ಸ್ಯಾಮ್ಸನ್‌ 5, ಅಭಿಷೇಕ್‌ ಶರ್ಮಾ 12, ತಿಲಕ್‌ ವರ್ಮಾ 72, ಸೂರ್ಯಕುಮಾರ್‌ ಯಾದವ್‌ 12, ದ್ರುವ್‌ ಜುರೆಲ್‌ 4, ಹಾರ್ದಿಕ್‌ ಪಾಂಡ್ಯ 7, ವಾಷಿಂಗ್ಟನ್‌ ಸುಂದರ್‌ 26, ಅಕ್ಷರ್‌ ಪಟೇಲ್‌ 2, ಅರ್ಷದೀಪ್‌ ಸಿಂಗ್‌ 6, ರವಿ ಬಿಷ್ಣೋಯಿ 9.

ಇಂಗ್ಕೆಂಡ್‌ ಪರ ಬ್ರಿಡನ್‌ ಕಾರ್ಸ್‌ 3 ವಿಕೆಟ್‌ ಹಾಗೂ ಜೋಫ್ರಾ ಆರ್ಚರ್‌, ಮಾರ್ಕ್‌ ವುಡ್‌, ಅದಿಲ್‌ ರಶೀದ್‌, ಹಜಾಮಿ ಓವರ್ಟನ್‌ ಮತ್ತು ಲಿವಿಂಗ್‌ಸ್ಟೋನ್‌ ತಲಾ 1 ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

55 mins ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

1 hour ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

2 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

2 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

5 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

5 hours ago