ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು ಫಾರ್ಮ್ ಕಂಡುಕೊಳ್ಳಲು ಈ ಸರಣಿಯು ಉತ್ತಮ ಅವಕಾಶವಾಗಿದೆ.
ಈ ಹಿಂದೆ ನಡೆದ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಹಾಗೂ ದೇಶಿ ಟೂರ್ನಿ ರಣಜಿಯಲ್ಲೂ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಶುಭಮನ್ ಗಿಲ್ ಸೇರಿದಂತೆ ಟೀಂ ಇಂಡಿಯಾದ ಅನೇಕ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇದೀಗ ಉತ್ತಮ ಅವಕಾಶವಿದ್ದು ಈ ಸರಣಿಯಲ್ಲಿ ಮತ್ತೆ ಲಯಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ.