ದುಬೈ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ತಲುಪಿರುವ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆ.
ಬಿ ಗುಂಪಿನಲ್ಲಿ ನಾಲ್ಕರ ಘಟ್ಟಕ್ಕೆ ತಲುಪಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡವು ಬಲಾಢ್ಯವಾಗಿದ್ದು, ಅವರ ವಿರುದ್ಧ ಸೆಣಸಾಡಬೇಕಾದರೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯವು ಭಾರತ ತಂಡಕ್ಕೆ ಪೂರ್ವಸಿದ್ಧತೆಯ ಪರೀಕ್ಷೆಯಾಗಲಿದೆ.
ಇಂದು ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಭಾರತ ಮತ್ತು ನ್ಯೂಜಿಲೆಂಡ್ ಎರಡು ತಂಡಗಳು ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಸಮತೋಲನದಿಂದ ಕೂಡಿವೆ
ಪಂದ್ಯ ಆರಂಭ: ಮಧ್ಯಾಹ್ನ 2.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೊ ಹಾಟ್‌ಸ್ಟಾರ್ ಆಪ್





