ಪಂಜಾಬ್: ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ.
ಇಲ್ಲಿನ ಪಂಜಾಬ್ ಅಸೋಸಿಯೇಷನ್ ಬಿಂದ್ರಾ ಸ್ಟೇಡಿಯಂ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಫ್ಘನ್ ಮೇಲಿನ ತನ್ನ ಅಜೇಯ ಓಟ ಮುಂದುವರೆಸಿದೆ. ಈವರೆಗೆ ಟೀಂ ಇಂಡಿಯಾ ಮತ್ತು ಅಫ್ಘನ್ ತಂಡಗಳು 6 ಪಂದ್ಯಗಳನ್ನು ಆಡಿದ್ದು, ಭಾರತ 5 ರಲ್ಲಿ ಗೆದ್ದಿದೆ ಅಫ್ಘನ್ ಒಂದು ಪಂದ್ಯವನ್ನು ಗೆದ್ದಿಲ್ಲ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ಆರಂಭಿಕ ಆಟಗಾರರಾದ ಗುರ್ಬಾಜ್ (23) ಮತ್ತು ನಾಯಕ ಜದ್ರಾನ್(25) ಉತ್ತಮ ಆರಂಭ ಒದಗಿಸಿದರು. ಅಜ್ಮತ್ತುಲ್ಲಾ ಒಮರಾಜಿ (29) ರನ್ ಬಾರಿಸಿ ತಂಡಕ್ಕೆ ಚೇತರಿಕೆ ರನ್ ನೀಡಿದರು. ರಹಮತ್ ಕೇವಲ 3 ರನ್ ಗಳಿಸಿ ನಿರ್ಗಮಿಸಿದರು.
ಮಾಜಿ ನಾಯಕ ನಬಿ (42) ರನ್ ಬಾರಿಸಿ ತಂಡದ ಮೊತ್ತ 150 ರ ಗಡಿ ದಾಟಲು ಸಹಕರಿಸಿದರು. ನಜೀಬುಲ್ಲಾ ಜದ್ರಾನ್ (19) ಕೊನೆಯಲ್ಲಿ ಆರ್ಭಟಿಸಿದರು.
ಟೀಂ ಇಂಡಿಯಾ ಪರ ಮುಖೇಶ್ ಕುಮಾರ್ 33/2, ಅಕ್ಷರ್ ಪಟೇಲ್ 23/2 ಮತ್ತು ಶಿವಂ ದುಬೆ 9/1 ವಿಕೆಟ್ ಪಡೆದರು.
ಇನ್ನು ಅಫ್ಘನ್ ನೀಡಿದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ನಂತರ ಜೊತೆಯಾದ ಶುಭ್‌ಮನ್ ಗಿಲ್ (23) ಮತು ತಿಲಕ್ ವರ್ಮಾ (26) ರನ್ ಬಾರಿಸಿ ತಂಡಕ್ಕೆ ಚೇತರಿಕೆ ಆಟವಾಡಿದರು. ಜಿತೇಶ್ ಶರ್ಮಾ (31) ರನ್ ಬಾರಿಸಿದರು.
ಆಲ್‌ರೌಂಡರ್ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 60 ರನ್ ಕಲೆ ಹಾಕಿದರು. ರಿಂಕು ಸಿಂಗ್ (16) ರನ್ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಟೀಂ ಇಂಡಿಯಾ ಅಂತಿಮವಾಗಿ 17.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಅಫ್ಘನ್ ಪರ ಮುಜೀಬ್ ರಹಮನ್ 21/2, ಓಮರಾಜಿ 25/1 ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಶಿವಂ ದುಬೆ
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…