ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯಲಿರುವ ಭಾರತ ಮತ್ತ ಅಫ್ಘಾನಿಸ್ತಾನ ನಡುವಿನ ಮೊಲದ ಟಿ೨೦ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ದುಕೊಂಡಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ೨೦ ಪಂದ್ಯಗಳು ನಡೆಯಲಿವೆ. ಇಂದು ಮೊಲದ ಟಿ೨೦ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಪರ ವರ್ಷಗಳ ನಂತರ ಮತ್ತೆ ಟಿ೨೦ ನಾಯಕರಾಗಿ ರೋಹಿತ್ ಶರ್ಮಾ ವಾಪಾಸಾತಿಯಾಗಿದ್ದಾರೆ. ಮತ್ತು ಮೊದಲನೇ ಪಂದ್ಯಕ್ಕೆ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ಅಲಭ್ಯರಾಗಿದ್ದಾರೆ. ಅಫ್ಘಾನ್ ಪರ ರಶೀದ್ ಖಾನ್ ಕೂಡಾ ಈ ಪಂದ್ಯದಲ್ಲಿ ಆಡುತ್ತಿಲ್ಲ.
ಇತ್ತಂಡಗಳ ಆಡುವ ಹನ್ನೊಂದರ ಬಳಗ:
ಟೀಂ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ(ವಿ.ಕೀ), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್
ಅಫ್ಘಾನಿಸ್ತಾನ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್





