ನಿನ್ನೆ ( ನವೆಂಬರ್ 23 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 2 ವಿಕೆಟ್‌ಗಳ ರೋಚಕ ಜಯವನ್ನು ಸಾಧಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಸ್ಟೀವನ್ ಸ್ಮಿತ್ ಅವರ ಅರ್ಧಶತಕ ಹಾಗೂ ಜೋಶ್ ಇಂಗ್ಲಿಸ್ ಅವರ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 209 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿ ಗೆಲುವನ್ನು ಕಂಡು ಸರಣಿಯಲ್ಲಿ ಶುಭಾರಂಭ ಮಾಡಿತು.
ತಂಡದ ಪರ ಇಶಾನ್ ಕಿಶನ್ 39 ಎಸೆತಗಳಲ್ಲಿ 58 ರನ್ ಬಾರಿಸಿದರೆ, ನಾಯಕ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 80 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 14 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 22 ರನ್ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.
ಇನ್ನು ಭಾರತಕ್ಕೆ ಗೆಲ್ಲಲು ಅಂತಿಮ ಎಸೆತದಲ್ಲಿ 1 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಸಂದರ್ಭದಲ್ಲಿ ರಿಂಕು ಸಿಂಗ್ ಬ್ಯಾಟಿಂಗ್ ಮಾಡುತ್ತಿದ್ದರು ಹಾಗೂ ಸೀನ್ ಅಬಟ್ ಬೌಲಿಂಗ್ ಮಾಡಿದರು. ಸೀನ್ ಅಬಟ್ ಎಸೆದ ಅಂತಿಮ ಎಸೆತಕ್ಕೆ ರಿಂಕು ಸಿಂಗ್ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಹಳೆಯ ಐಪಿಎಲ್ ಪಂದ್ಯಗಳನ್ನು ನೆನಪಿಸಿಬಿಟ್ಟರು. ಆದರೆ ರಿಂಕು ಸಿಂಗ್ ಬಾರಿಸಿದ ಈ ಸಿಕ್ಸರ್ ಗಣನೆಗೆ ಬಾರಲೇ ಇಲ್ಲ. ಏಕೆಂದರೆ ಸೀನ್ ಅಬಟ್ ಎಸೆದ ಆ ಎಸೆತ ನೋ ಬಾಲ್ ಆಗಿತ್ತು. ಗೆಲುವಿಗೆ ಒಂದೇ ರನ್ ಅಗತ್ಯವಿದ್ದ ಕಾರಣ ನೋ ಬಾಲ್ ಮೊದಲು ಗಣನೆಗೆ ಬಂದು ಭಾರತ ಜಯ ಸಾಧಿಸಿತು ಹಾಗೂ ರಿಂಕು ಸಿಂಗ್ ಬಾರಿಸಿದ ಸಿಕ್ಸರ್ ರನ್ ಕೌಂಟ್‌ಗೆ ಅರ್ಹತೆ ಪಡೆಯಲಿಲ್ಲ. ಆದರೂ ಸಹ ರಿಂಕು ಸಿಂಗ್ ಬಾರಿಸಿದ ಆ ಸಿಕ್ಸರ್ ಕ್ರಿಕೆಟ್ ಅಭಿಮಾನಿಗಳ ಫೇವರಿಟ್ ಆಗಿದೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…