Mysore
14
few clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

IND vs AUS 2ನೇ ಟಿ 20: ಟಾಸ್‌ ವರದಿ ಮತ್ತು ಆಡುವ ಬಳಗ

ತಿರುವನಂತಪುರಂ : ಇಲ್ಲಿನ ಗ್ರೀನ್‌ ಫೀಲ್ಡ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್‌ ಗೆದ್ದು  ಬೌಲಿಂಗ್‌ ಆಯ್ದುಕೊಂಡಿದೆ.

ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್‌ಗಳಿಂದ ಮಣಿಸಿತ್ತು.

ಸೂರ್ಯಕುಮಾರ್‌ ಯಾದವ್‌ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್‌ ಕಪ್‌ನಲ್ಲಿ ನಿರೀಕ್ಷಿತ ಆಟ ತೋರದ  ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.

ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಎರಡನೇ  ಟಿ-20 ಪಂದ್ಯದ ಪ್ಲೆಯಿಂಗ್‌ 11

ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!