ಕ್ರೀಡೆ

IND vs AUS: ರೋಹಿತ್ ಬಳಗಕ್ಕೆ 270 ರನ್ ಗುರಿ ನೀಡಿದ ಆಸ್ಟ್ರೇಲಿಯಾ

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಈ ಮೂಲಕ ಸರಣಿ ಗೆಲ್ಲಲು ರೋಹಿತ್ ಶರ್ಮಾ ಬಳಗವು 270 ರನ್ ಗಳಿಸಬೇಕಿದೆ.

ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಚನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.

ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

ಮಾರ್ಷ್ ಹಾಗೂ ಹೆಡ್ ಮೊದಲ ವಿಕೆಟ್‌ಗೆ 68 ರನ್ ಗಳಿಸಿದರು. ಈ ಹಂತದಲ್ಲಿ ಹಾರ್ದಿಕ್ ತಿರುಗೇಟು ನೀಡಿದರು. ಪರಿಣಾಮ ಆಸ್ಟ್ರೇಲಿಯಾ 138 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಕೆಳ ಕ್ರಮಾಂಕದಲ್ಲಿ ಆಸೀಸ್ ಆಟಗಾರರ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇತ್ತಂಡಗಳ ಪಾಲಿಗೆ ಈ ಪಂದ್ಯ ನಿರ್ಣಾಯಕವೆನಿಸಿದೆ.

andolanait

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

2 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

3 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

3 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

3 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

3 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

3 hours ago