ಕ್ರೀಡೆ

IND vs AUS: ಮುಗ್ಗರಿಸಿದ ಭಾರತ; ಆಸ್ಟ್ರೇಲಿಯಾಕ್ಕೆ 10 ವಿಕೆಟ್ ಗೆಲುವು

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, 26 ಓವರ್‌ಗಳಲ್ಲಿ 117 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಇನ್ನೂ 234 ಎಸೆತಗಳು ಬಾಕಿ ಉಳಿದಿರುವಂತೆಯೇ 11 ಓವರ್‌ಗಳಲ್ಲಿ ಗುರಿ ತಲುಪಿತು. ಮಿಚೆಲ್ ಮಾರ್ಷ್ (ಅಜೇಯ 66, ಎಸೆತ 36 , ಸಿಕ್ಸರ್ 6, ಬೌಂಡರಿ 6) ಹಾಗೂ ಟ್ರಾವಿಸ್ ಹೆಡ್ (ಅಜೇಯ 51, ಎಸೆತ 30, ಬೌಂಡರಿ 10) ಬಿರುಸಿನ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯ ಅಂತಿಮ ಪಂದ್ಯವು ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿದೆ.

ಸ್ಟಾರ್ಕ್ ದಾಳಿಗೆ ತತ್ತರಿಸಿದ ಭಾರತ…
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 32 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಶುಭಮನ್ ಗಿಲ್ (0) ಹಾಗೂ ನಾಯಕ ರೋಹಿತ್ ಶರ್ಮಾ (13) ವಿಕೆಟ್‌ಗಳು ನಷ್ಟವಾದವು.

ಅತಿಥೇಯರನ್ನು ಮಿಚೆಲ್ ಮಾರಕವಾಗಿ ಕಾಡಿದರು. ಪರಿಣಾಮ 49 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು.

ಸೂರ್ಯಕುಮಾರ್ ಯಾದವ್ ಸತತ ಎರಡನೇ ಬಾರಿಗೆ ಗೋಲ್ಡನ್ ಡೆಕ್ ಔಟ್ ಆದರು. ಕೆ.ಎಲ್. ರಾಹುಲ್ (9) ಹಾಗೂ ಹಾರ್ದಿಕ್ ಪಾಂಡ್ಯ (1) ಪ್ರಭಾವಿ ಎನಿಸಲಿಲ್ಲ.

31 ರನ್ ಗಳಿಸಿದ ವಿರಾಟ್ ಕೊಹ್ಲಿ ಭರವಸೆ ಹುಟ್ಟು ಹಾಕಿದರೂ ಅವರ ಓಟಕ್ಕೆ ನಥನ್ ಎಲ್ಲಿಸ್ ತಡೆ ಒಡ್ಡಿದರು. ಇಲ್ಲಿಂದ ಬಳಿಕ ಮಗದೊಮ್ಮೆ ಕುಸಿತ ಕಂಡ ಭಾರತ 26 ಓವರ್‌ಗಳಲ್ಲೇ ಆಲೌಟ್ ಆಯಿತು.

ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾಗದೆ ಉಳಿದರು. ರವೀಂದ್ರ ಜಡೇಜ 16, ಕುಲದೀಪ್ ಯಾದವ್ 4 ರನ್ ಗಳಿಸಿ ಔಟ್ ಔದರು. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ಖಾತೆ ತೆರೆಯಲಾಗಲಿಲ್ಲ.

ಆಸೀಸ್ ಪರ 53 ರನ್ ತೆತ್ತ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಕಬಳಿಸಿದರು. ಸೀನ್ ಅಬಾಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಗಳಿಸಿದರು.

andolanait

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

51 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

1 hour ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

1 hour ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago