ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, 26 ಓವರ್‌ಗಳಲ್ಲಿ 117 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.
ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಇನ್ನೂ 234 ಎಸೆತಗಳು ಬಾಕಿ ಉಳಿದಿರುವಂತೆಯೇ 11 ಓವರ್‌ಗಳಲ್ಲಿ ಗುರಿ ತಲುಪಿತು. ಮಿಚೆಲ್ ಮಾರ್ಷ್ (ಅಜೇಯ 66, ಎಸೆತ 36 , ಸಿಕ್ಸರ್ 6, ಬೌಂಡರಿ 6) ಹಾಗೂ ಟ್ರಾವಿಸ್ ಹೆಡ್ (ಅಜೇಯ 51, ಎಸೆತ 30, ಬೌಂಡರಿ 10) ಬಿರುಸಿನ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಸರಣಿಯ ಅಂತಿಮ ಪಂದ್ಯವು ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿದೆ.
ಸ್ಟಾರ್ಕ್ ದಾಳಿಗೆ ತತ್ತರಿಸಿದ ಭಾರತ…
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 32 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಶುಭಮನ್ ಗಿಲ್ (0) ಹಾಗೂ ನಾಯಕ ರೋಹಿತ್ ಶರ್ಮಾ (13) ವಿಕೆಟ್‌ಗಳು ನಷ್ಟವಾದವು.
ಅತಿಥೇಯರನ್ನು ಮಿಚೆಲ್ ಮಾರಕವಾಗಿ ಕಾಡಿದರು. ಪರಿಣಾಮ 49 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು.
ಸೂರ್ಯಕುಮಾರ್ ಯಾದವ್ ಸತತ ಎರಡನೇ ಬಾರಿಗೆ ಗೋಲ್ಡನ್ ಡೆಕ್ ಔಟ್ ಆದರು. ಕೆ.ಎಲ್. ರಾಹುಲ್ (9) ಹಾಗೂ ಹಾರ್ದಿಕ್ ಪಾಂಡ್ಯ (1) ಪ್ರಭಾವಿ ಎನಿಸಲಿಲ್ಲ.
31 ರನ್ ಗಳಿಸಿದ ವಿರಾಟ್ ಕೊಹ್ಲಿ ಭರವಸೆ ಹುಟ್ಟು ಹಾಕಿದರೂ ಅವರ ಓಟಕ್ಕೆ ನಥನ್ ಎಲ್ಲಿಸ್ ತಡೆ ಒಡ್ಡಿದರು. ಇಲ್ಲಿಂದ ಬಳಿಕ ಮಗದೊಮ್ಮೆ ಕುಸಿತ ಕಂಡ ಭಾರತ 26 ಓವರ್‌ಗಳಲ್ಲೇ ಆಲೌಟ್ ಆಯಿತು.
ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾಗದೆ ಉಳಿದರು. ರವೀಂದ್ರ ಜಡೇಜ 16, ಕುಲದೀಪ್ ಯಾದವ್ 4 ರನ್ ಗಳಿಸಿ ಔಟ್ ಔದರು. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ಖಾತೆ ತೆರೆಯಲಾಗಲಿಲ್ಲ.
ಆಸೀಸ್ ಪರ 53 ರನ್ ತೆತ್ತ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಕಬಳಿಸಿದರು. ಸೀನ್ ಅಬಾಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಗಳಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…