ಕ್ರೀಡೆ

IND vs BAN: ಫೀಲ್ಡಿಂಗ್ ವೇಳೆ ಎಡಗೈಗೆ ಗಾಯ ಮಾಡಿಕೊಂಡ ರೋಹಿತ್‌ ಶರ್ಮಾ

ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.

ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಬಾಂಗ್ಲಾದೇಶ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್‌ಗೆ ಸವರಿ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು. ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್‌ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago