ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.
ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ಬಾಂಗ್ಲಾದೇಶ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್‌ಗೆ ಸವರಿ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು. ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್‌ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…