ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ.
ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 246ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಆಲ್ ರೌಂಡರ್ ಬೆನ್ ಸ್ಟೋಕ್ಸ್ 70 ರನ್ ಗಳಿಸಿದರೆ, ಡಕೆಟ್ 35 ರನ್, ಝ್ಯಾಕ್ ಕ್ರಾಲಿ 20, ಜಾನಿ ಬೇರ್ ಸ್ಟೋ 37, ಜೋ ರೂಟ್ 29, ಟಾಮ್ ಹಾರ್ಟ್ಲೇ 23 ರನ್ ಗಳಿಸಿದರು.
ಪಂದ್ಯದ ಆರಂಭದಿಂದಲೂ ಕರಾರುವಕ್ಕಾದ ದಾಳಿ ಮಾಡಿದ ಭಾರತೀಯ ಬೌಲರ್ ಗಳು 128 ರನ್ ಗಳಿಗೆ 5 ವಿಕೆಟ್ ಕಬಳಿಸಿದ್ದರು. ಈ ಹೊತ್ತಿನಲ್ಲಿ ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಆಲ್ರೌಂಡರ್ ಬೆನ್ ಸ್ಟೋಕ್ಸ್ ನೆರವಾದರು. 88 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ ಸ್ಟೋಕ್ಸ್ 70ರನ್ ಸಿಡಿಸಿದರು. ಅವರಿಗೆ ತಂಡದ ಇತರೆ ಆಟಗಾರರಿಂದ ಸಾಥ್ ದೊರೆಯಲಿಲ್ಲ. ಸ್ಟೋಕ್ಸ್ ಕೂಡ 70 ರನ್ ಗಳಿಸಿ ಬುಮ್ರಾಗೆ ಕ್ಲೀನ್ ಬೋಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು
ಆ ಮೂಲಕ ಇಂಗ್ಲೆಂಡ್ ತಂಡ 246ರನ್ ಗೆ ಆಲೌಟ್ ಆಯಿತು. ಭಾರತ ತಂಡದ ಪರ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರೆ, ಬುಮ್ರಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…