ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ 230ರನ್ ಗುರಿ ನೀಡಿದೆ ಇಂಗ್ಲೆಂಡ್.
ಮೊದಲ ಟೆಸ್ಟ್‌ನ ನಾಲ್ಕನೇ ದಿನವಾದ ಇಂದು 316ರನ್ ಗಳಿಂದ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ 106 ರನ್ ಬಾರಿಸಿ ಉಳಿದ ನಾಲ್ಕು ವಿಕೆಟ್ ಕಳೆದುಕೊಂಡು ಟೀಂ ಇಂಡಿಯಾಗೆ 230 ರನ್‌ಗಳ ಗುರಿ ನೀಡಿದೆ.
ಒಲಿ ಪೋಪ್ ತಾವೆದುರಿಸಿದ 278 ಎಸೆತಗಳಲ್ಲಿ 21 ಬೌಂಡರಿ ಸಹಿತ 196 ರನ್ ಬಾರಿಸಿ ಕೇವಲ 4 ರನ್‌ಳಿಂದ ದ್ವಿಶತಕ ವಂಚಿತರಾದರು. ರೆಹನ್ ಅಹ್ಮದ್ (28), ಟಾಮ್ ಹಾರ್ಟ್ಲಿ (34)ರನ್ ಗಳಿಸಿದರು. ಅಂತಿಮವಾಗಿ ೧೦೨ ಓವರ್‌ಗಳಲ್ಲಿ 420 ರನ್‌ಗಳಿಗೆ ಸರ್ವಪತನವಾಯಿತು.
ಟೀಂ ಇಂಡಿಯಾ ಪರ ಜಸ್‌ಪ್ರಿತ್ ಬುಮ್ರಾ 41/4, ಅಶ್ವಿನ್ 126/3, ಮತ್ತು ಜಡೇಜಾ 131/2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…