ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 28 ರನ್‌ಗಳ ಸೋಲು ಅನುಭವಿಸಿದೆ.
ಈ ಪಂದ್ಯದ ಗೆಲುವಿನೊಂದಿಗೆ ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಎರಡನೇ ಇನ್ನಿಂಗ್ಸ್‌ನಲ್ಲಿ 231ರನ್ ಗುರಿ ನೀಡಿದ ಇಂಗ್ಲೆಂಡ್, ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 202 ರನ್ ಗಳಿಗೆ ಆಲ್‌ಔಟ್ ಆಗುವ ಮೂಲಕ 28 ರನ್ ಗಳಿಂದ ಸೋಲನುಭವಿಸಿತು.
ಟೀಂ ಇಂಡಿಯಾ ಪರವಾಗಿ ನಾಯಕ ರೋಹಿತ್ ಶರ್ಮಾ 39 ರನ್ ಗಳಿಸಿದ್ದೇ ತಂಡದ ಪರವಾಗಿ ಅತಿಹೆಚ್ಚು ರನ್. ಕಳೆದ ಪಂದ್ಯದಲ್ಲಿ ವಿವಾದಾತ್ಮಕವಾಗಿ ಔಟಾಗಿದ್ದ ಜಡೇಜಾ, ಈ ಪಂದ್ಯದಲ್ಲಿ ರನ್‌ಔಟ್ ಆಗಿ ಹೊರನಡೆದರು.
ಇಂಗ್ಲೆಂಡ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಟಾಮ್ ಹಾರ್ಟ್ಲಿ 7 ವಿಕೆಟ್ ಪಡೆದು ಭಾರತ ತಂಡದಿಂದ ಗೆಲುವನ್ನು ಕಸಿದುಕೊಂಡರು.
ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ಒಲಿ ಪೋಪ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: ಮೊಲದ ಇನ್ನಿಂಗ್ಸ್ 246 ಮತ್ತು ಎರಡನೇ ಇನ್ನಿಂಗ್ಸ್ 420
ಟೀಂ ಇಂಡಿಯಾ: ಮೊಲದ ಇನ್ನಿಂಗ್ಸ್ 436 ಮತ್ತು ಎರಡನೇ ಇನ್ನಿಂಗ್ಸ್ 202
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…