ಕ್ರೀಡೆ

INd vs ENG 2nd test: ಶುಭ್‌ಮನ್‌ ಗಿಲ್‌ ಶತಕ; ಇಂಗ್ಲೆಂಡ್‌ಗೆ 399 ರನ್‌ ಗುರಿ ನೀಡಿದ ಭಾರತ

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್‌ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಗೆ 399 ರನ್‌ ಗುರಿ ನೀಡಿದೆ.

ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 78.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 255 ರನ್‌ ಕಲೆಹಾಕಿ ಆಂಗ್ಲ ಪಡೆಗೆ 399 ರನ್‌ ಟಾರ್ಗೆಟ್‌ ನೀಡಿದೆ.

ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿ ಟೀಂ ಇಂಡಿಯಾಗೆ ಇಂಗ್ಲೆಂಡ್‌ ವೇಗಿ ಆಂಡರ್‌ಸನ್‌ ಆರಂಭಿಕ ಆಘಾತ ನೀಡಿದರು. ತನ್ನ ಒಂದೇ ಓವರ್‌ನಲ್ಲಿ ಜೈಸ್ವಾಲ್‌ (17) ಮತ್ತು ನಾಯಕ ರೋಹಿತ್‌ ಶರ್ಮಾ (13) ವಿಕೆಟ್‌ ಪಡೆದರು. ಇದರ ನಡುವೆ ತಾಳ್ಮೆಯ ಆಟವಾಡಿದ ಶುಭ್‌ಮನ್‌ ಗಿಲ್‌ (104) ಶತಕ ದಾಖಲಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಅಯ್ಯರ್‌ (29), ಅಶ್ವಿನ್‌ (29) ಮತ್ತು ಅಕ್ಷರ್‌ ಪಟೇಲ್‌ (45) ರನ್‌ ಬಾರಿಸಿ ಗಮನ ಸೆಳೆದರು.

ಇತ್ತ ಇಂಗ್ಲೆಂಡ್‌ ಪರ ಉತ್ತಮ ಬೌಲಿಂಗ್‌ ದಾಳಿ ನಡೆಸಿದ ಟಾಮ್‌ ಹಾರ್ಟ್ಲಿ 77/4, ರೆಹೆನ್‌ ಅಹ್ಮದ್‌ 88/3 ಮತ್ತು ಆಂಡರ್‌ಸನ್‌ 29/2 ವಿಕೆಟ್‌ ಪಡೆದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

53 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago