ಕ್ರೀಡೆ

IND vs ENG 2nd test: ಟೀಂ ಇಂಡಿಯಾಗೆ 106 ರನ್​ಗಳ ಭರ್ಜರಿ ಜಯ

ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.

ವಿಶಾಖಪಟ್ಟಣಂನಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 396 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದರು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 253 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. 143 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 255 ರನ್​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿತು. ತಂಡದ ಪರ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಇಂಗ್ಲೆಂಡ್​ಗೆ 399 ರನ್​ಗಳ ಗೆಲುವಿನ ಗುರಿ ನೀಡಿತು.

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 4ನೇ ದಿನದಾಟದ ಎರಡನೇ ಸೆಷನ್​ನಲ್ಲಿ 292 ರನ್​ಗಳಿಗೆ ಆಲೌಟ್ ಆಗುವ ಮೂಲಕ 106 ರನ್​ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಸ್ಕೋರ್‌ ವಿವರ:
ಭಾರತ ಇನ್ನಿಂಗ್ಸ್‌: 396 ಮತ್ತು 255
ಇಂಗ್ಲೆಂಡ್‌ ಇನ್ನಿಂಗ್ಸ್‌: 253 ಮತ್ತು 292

ಪಂದ್ಯ ಶ್ರೇಷ್ಠ: ಜಸ್‌ಪ್ರಿತ್‌ ಬುಮ್ರಾ

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ ಪಂದ್ಯ:
ಸ್ಥಳ: ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣ
ದಿನಾಂಕ: ಫೆ.15 ರಿಂದ 19
ಲೈವ್‌: ಸ್ಪೋರ್ಟ್ಸ್‌ 18 ನೆಟ್‌ ವರ್ಕ್‌
ಲೈವ್‌ ಸ್ಟ್ರೀಮಿಂಗ್‌: ಜಿಯೋ ಸಿನಿಮಾ

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago