ಕ್ರೀಡೆ

IND vs ENG: ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಜಯ

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್ ಆರಿಸಿಕೊಂಡು 47.4 ಓವರ್‌ಗಳಲ್ಲಿ 248 ರನ್‌ಗೆ ಆಲ್‌ಔಟ್‌ ಆಗಿ ಇಂಗ್ಲೆಂಡ್‌ಗೆ 249 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಭಾರತ 38.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 251 ರನ್‌ ಕಲೆಹಾಕಿತು.

ಇಂಗ್ಲೆಂಡ್‌ ಇನ್ನಿಂಗ್ಸ್:‌ ಫಿಲಿಪ್‌ ಸಾಲ್ಟ್‌ 43, ಬೆನ್‌ ಡಕೆಟ್‌ 32, ಜೋ ರೂಟ್‌ 19, ಹ್ಯಾರಿ ಬ್ರೂಕ್‌ 0, ಜೋಸ್‌ ಬಟ್ಲರ್‌ 52, ಜೇಕಬ್‌ ಬೆಥೆಲ್‌ 51, ಲಿಯಾಮ್‌ ಲಿವಿಂಗ್‌ಸ್ಟನ್‌ 5, ಬ್ರೈಡನ್‌ ಕೇರ್ಸ್‌ 10, ಆದಿಲ್‌ ರಶೀದ್‌ 8, ಸಕೀಬ್‌ ಮಹ್ಮೂದ್‌ 2 ಹಾಗೂ ಜೋಫ್ರಾ ಆರ್ಚರ್‌ ಅಜೇಯ 21 ರನ್‌ ಗಳಿಸಿದರು.

ಭಾರತದ ಪರ ಹರ್ಷಿತ್‌ ರಾಣಾ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್‌, ಮೊಹಮ್ಮದ್‌ ಶಮಿ, ಅಕ್ಷರ್‌ ಪಟೇಲ್‌ ಹಾಗೂ ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್:‌ ಯಶಸ್ವಿ ಜೈಸ್ವಾಲ್‌ 15, ರೋಹಿತ್‌ ಶರ್ಮಾ 2, ಶುಬ್‌ಮನ್‌ ಗಿಲ್‌ 87, ಶ್ರೇಯಸ್‌ ಐಯ್ಯರ್‌ 59, ಅಕ್ಷರ್‌ ಪಟೇಲ್‌ 52, ಕೆಎಲ್‌ ರಾಹುಲ್‌ 2, ಹಾರ್ದಿಕ್‌ ಪಾಂಡ್ಯ ಅಜೇಯ 9 ಹಾಗೂ ರವೀಂದ್ರ ಜಡೇಜಾ ಅಜೇಯ 12 ರನ್‌ ಗಳಿಸಿದರು.

ಇಂಗ್ಲೆಂಡ್‌ ಪರ ಸಕೀಬ್ ಮಹ್ಮೂದ್‌ ಹಾಗೂ ಆದಿಲ್‌ ರಶೀದ್‌ ತಲಾ ಎರಡು ವಿಕೆಟ್‌ ಪಡೆದರೆ, ಜೋಫ್ರಾ ಆರ್ಚರ್‌ ಹಾಗೂ ಜೇಕಬ್‌ ಬೆಥೆಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

18 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

18 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

18 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

18 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

18 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

18 hours ago