ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 25 ರಂದು ನಡೆಯಲಿರುವ ಇಂಡೋ-ಆಂಗ್ಲರ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಎರಡನೇ ದಿನ ಭಾರತ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ) ತಿಳಿಸಿದೆ.
ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯುವ ದಿನದಾಟವನ್ನು ವೀಕ್ಷಿಸಲು ಭಾರತೀಯ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು. ಈ ಮೂಲಕ ಭಾರತೀಯ ಸೈನಿಕರ ಕುಟುಂಬದವರನ್ನು ಗೌರವಿಸಲು ಹೆಚ್ಸಿಎ ನಿರ್ಧರಿಸಿದ್ದು, ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ.
ಮೊದಲ ಟೆಸ್ಟ್ ಪಂದ್ಯದ ಟಿಕೆಟ್‌ಗಳು ಜನವರಿ 18 ರಿಂದ Paytm ಇನ್‌ಸೈಡರ್ ಅಪ್ಲಿಕೇಶನ್ ಮತ್ತು www.insider.in ಆನ್‌ಲೈನ್‌ನಲ್ಲಿ ಲಭ್ಯವಿರಲಿದೆ. ಆಫ್‌ಲೈನ್ ಟಿಕೆಟ್‌ಗಳ ಮಾರಾಟವು ಜಿಮ್ಖಾನಾ ಮೈದಾನದಲ್ಲಿ ಜನವರಿ 22 ರಿಂದ ಪ್ರಾರಂಭವಾಗಲಿದೆ. ಇಲ್ಲಿ ಪ್ರತಿ ದಿನದ ಟಿಕೆಟ್‌ಗಳ ಬೆಲೆ ₹200 ರಿಂದ ₹4,000 ವರೆಗೆ ಇರುತ್ತದೆ.
ಶಾಲಾ ಮಕ್ಕಳಿಗೂ ಪ್ರವೇಶ ಉಚಿತ:
ತೆಲಂಗಾಣ ಸರ್ಕಾರಿ ಶಾಲೆಯ VI ರಿಂದ XII ತರಗತಿಯ ವಿದ್ಯಾರ್ಥಿಗಳನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಹೈದಾರಾಬಾದ್ ಕ್ರಿಕೆಟ್ ಸಂಸ್ಥೆ ಆಹ್ವಾನಿಸಿದೆ. ತಮ್ಮ ಐಡಿ ಕಾರ್ಡ್ ತೋರಿಸಿ ಉಚಿತ ಪ್ರವೇಶ ಪಡೆಯಬಹುದು. ಹಾಗೆಯೇ ಶಾಲಾ ಸಮವಸ್ತ್ರವನ್ನು ಧರಿಸಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸಲಾಗುವುದು ಎಂದು ಹೆಚ್ಸಿಎ ತಿಳಿಸಿದೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…
ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್ ಬ್ಲಾಕ್-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…
ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…