ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.
ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್‌ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಸರಣಿಯಿಂದ ದೂರ ಉಳಿದಿದ್ದಾರೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಉಳಿದ ಪಂದ್ಯಗಳ ಮಾಹಿತಿ:
ಮೂರನೇ ಟೆಸ್ಟ್:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ರಾಜ್‌ಕೋಟ್.
ದಿನಾಂಕ: ಫೆಬ್ರವರಿ 15 – 19,
ನಾಲ್ಕನೆ ಟೆಸ್ಟ್:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,
ಐದನೇ ಟೆಸ್ಟ್:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…