ರಾಯಪುರ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಬಾರಿ ಶುಭಮನ್ ಗಿಲ್ ಅಬ್ಬರದ ದ್ವಿಶತಕದ ಬಲದಿಂದ ಭಾರತ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 12 ರನ್‌ಗಳ ಅಂತರದಿಂದ ಜಯ ಸಾಧಿಸಿತ್ತು. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶದ ಮೇಲೆ ರೋಹಿತ್ ಶರ್ಮಾ ಪಡೆ ಕಂಕ್ಕಿಳಿದಿದೆ.
ತಂಡಗಳಲ್ಲಿ ಯಾರೆಲ್ಲಾ ಇದ್ದಾರೆ ?
ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್: ಟಾಮ್ ಲಥಾಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಹೆನ್ರಿ ನಿಕೊಲ್ಸ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೆಸ್‌ವೆಲ್, ಮಿಚೆಲ್ ಸ್ಯಾಂಟನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್