Mysore
25
scattered clouds

Social Media

ಶನಿವಾರ, 31 ಜನವರಿ 2026
Light
Dark

IND vs RSA 1st test: ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್‌ ಪಂದ್ಯದಲ್ಲಿ ಡಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್‌ ಆಯ್ದುಕೊಂಡಿದೆ.

ಇಲ್ಲಿನ ಸೆಂಚುರಿಯನ್​ನಲ್ಲಿನ ಸೂಪರ್​ಸ್ಪೋರ್ಟ್​ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಭಾರತದ ಪರ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ. ಫಿಟ್​ನೆಸ್ ಸಮಸ್ಯೆಯ ಕಾರಣ ಜಡ್ಡು ಹೊರಗುಳಿದಿದ್ದು, ಅವರ ಬದಲಿಗೆ ಶಾರ್ದೂಲ್ ಠಾಕೂರ್​ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ಪರ ಈ ಪಂದ್ಯದಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಝೋರ್ಝಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಝಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್.

ಈವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 42 ಬಾರಿ ಮುಖಾಮುಖಿಯಾಗಿದ್ದು, ಭಾರತ 15 ಪಂದ್ಯ ಗೆದ್ದರೇ, ಸೌಥ್‌ ಆಫ್ರಿಕಾ 17 ಬಾರಿ ಜಯಗಳಿಸಿದೆ. 10 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!