ಕೇಪ್‌ಟೌನ್: ಇಲ್ಲಿನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಡೀನ್ ಎಲ್ಗರ್ ನಾಯಕರಾಗಲಿದ್ದಾರೆ.
ತಮ್ಮ ಕ್ರಿಕೆಟ್ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಅವರು ನಾಯಕರಾಗಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಾಯಕ ತೆಂಬಾ ಬವುಮಾ ಅವರು ಕೇಪ್ ನಲ್ಲಿ ನಡೆಯಲಿರುವ ಕೊನೆಯ ಪಂದ್ಯಕ್ಕೆ ಅಲಭ್ಯವಾಗಲಿದ್ದು, ಅವರ ಬದಲಿ ನಾಯಕರಾಗಿ ಎಲ್ಗರ್ ಕ್ರಿಕೆಟ್ ದಕ್ಷಿಣ ಆಫ್ರಿಕಾ ನೇಮಕಗೊಳಿಸಿದೆ.
ಇನ್ನೂ ತೆಂಬ ಬವುಮಾ ಅವರ ಬದಲಿಗೆ ಜುಬೇರ್ ಹಂಝಾ ಅವರು ಸ್ಥಾನ ಪಡೆದಿದ್ದಾರೆ.
36 ವರ್ಷದ ಎಲ್ಗರ್ ಟೀಂ ಇಂಡಿಯಾ ವಿರುದ್ಧ ಆಡಿದ ಮೊಲದ ಟೆಸ್ಟ್‌ನಲ್ಲಿ 185 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
ಡೀನ್ ಎಲ್ಗರ್ ಅವರು ಟೆಸ್ಟ್ ನಲ್ಲಿ ಇವರೆಗೆ 85 ಪಂದ್ಯಗಳಿಂದ 150 ಇನ್ನಿಂಗ್ಸ್ ಆಡಿದ್ದಾರೆ. 38.08ರ ಸರಾಸರಿಯಲ್ಲಿ 5,331 ರನ್ ದಾಖಲಿಸಿದ್ದು, ಇದರಲ್ಲಿ 14 ಶತಕ ಮತ್ತು 23 ಅರ್ಧ ಶತಕ ಬಾರಿಸಿದ್ದಾರೆ. 199 ರನ್ ಇದು ಅವರ ಟೆಸ್ಟ್‌ನ ಗರಿಷ್ಠ ರನ್ ಆಗಿದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…