ಕ್ರೀಡೆ

IND vs SA 2nd test: ವೃತ್ತಿ ಜೀವನದ ಅಂತಿಮ ಪಂದ್ಯಕ್ಕೆ ಡೀನ್‌ ಎಲ್ಗರ್‌ ನಾಯಕ

ಕೇಪ್‌ಟೌನ್‌: ಇಲ್ಲಿನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಡೀನ್‌ ಎಲ್ಗರ್‌ ನಾಯಕರಾಗಲಿದ್ದಾರೆ.

ತಮ್ಮ ಕ್ರಿಕೆಟ್‌ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಅವರು ನಾಯಕರಾಗಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಾಯಕ ತೆಂಬಾ ಬವುಮಾ ಅವರು ಕೇಪ್‌ ನಲ್ಲಿ ನಡೆಯಲಿರುವ ಕೊನೆಯ ಪಂದ್ಯಕ್ಕೆ ಅಲಭ್ಯವಾಗಲಿದ್ದು, ಅವರ ಬದಲಿ ನಾಯಕರಾಗಿ ಎಲ್ಗರ್‌ ಕ್ರಿಕೆಟ್‌ ದಕ್ಷಿಣ ಆಫ್ರಿಕಾ ನೇಮಕಗೊಳಿಸಿದೆ.

ಇನ್ನೂ ತೆಂಬ ಬವುಮಾ ಅವರ ಬದಲಿಗೆ ಜುಬೇರ್‌ ಹಂಝಾ ಅವರು ಸ್ಥಾನ ಪಡೆದಿದ್ದಾರೆ.

36 ವರ್ಷದ ಎಲ್ಗರ್‌ ಟೀಂ ಇಂಡಿಯಾ ವಿರುದ್ಧ ಆಡಿದ ಮೊಲದ ಟೆಸ್ಟ್‌ನಲ್ಲಿ 185 ರನ್‌ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಡೀನ್‌ ಎಲ್ಗರ್‌ ಅವರು ಟೆಸ್ಟ್‌ ನಲ್ಲಿ ಇವರೆಗೆ 85 ಪಂದ್ಯಗಳಿಂದ 150 ಇನ್ನಿಂಗ್ಸ್‌ ಆಡಿದ್ದಾರೆ. 38.08ರ ಸರಾಸರಿಯಲ್ಲಿ 5,331 ರನ್‌ ದಾಖಲಿಸಿದ್ದು, ಇದರಲ್ಲಿ 14 ಶತಕ ಮತ್ತು 23 ಅರ್ಧ ಶತಕ ಬಾರಿಸಿದ್ದಾರೆ. 199 ರನ್‌ ಇದು ಅವರ ಟೆಸ್ಟ್‌ನ ಗರಿಷ್ಠ ರನ್‌ ಆಗಿದೆ.

https://x.com/ProteasMenCSA/status/1740426033768419508?s=20

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago