ಕ್ರೀಡೆ

IND vs SA 3rd T20: ಪಂದ್ಯದ ಟಾಸ್ ವರದಿ, ಆಡುವ ಬಳಗದ ಮಾಹಿತಿ

ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ  ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್‌ಬರ್ಗ್‌ ನ ನ್ಯೂ ವಂಡರ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾ‌ರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್‌ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್‌ ಮಹಾರಾಜ್‌,

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago