ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ.
ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಮತ್ತು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ರ ಅರ್ಧಶತಕಗಳ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 349ರನ್ ಪೇರಿಸಿತು.





