ಕೇಟ್‌ಟೌನ್: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಬುಧವಾರ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಸ್ಟೆಫಾನಿ ಟೈಲರ್ 42, ಶೆಮೈನ್ ಕ್ಯಾಂಪ್‌ಬೆಲ್ 30, ಚೆಡಿಯನ್ ನೇಷನ್ 21 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.
119 ರನ್ ಗುರಿ ಬೆನ್ನತ್ತಿದ ಭಾರತ 18.1 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಭಾರತದ ಪರ ರಿಚಾ ಘೋಷ್ ಔಟಾಗದೆ 44, ಹರ್ಮನ್‌ಪ್ರೀತ್ ಕೌರ್ 33, ಶಫಾಲಿ ವರ್ಮಾ 28 ರನ್ ಗಳಿಸಿ ಗೆಲುವಿನ ರೂವಾರಿಗಳಾದರು.
ವೆಸ್ಟ್ ಇಂಡೀಸ್ ಪರ ಕರಿಷ್ಮಾ ರಾಮ್‌ಹರಾಕ್ 2, ಹೇಲಿ ಮ್ಯಾಥ್ಯೂಸ್, ಚಿನೆಲ್ಲೆ ಹೆನ್ರಿ ತಲಾ ಒಂದೊಂದು ವಿಕೆಟ್ ಪಡೆದರು. ಭಾರತ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಫೆ.12ರಂದು (ಭಾನುವಾರ) ಪಾಕಿಸ್ತಾನ ವಿರುದ್ಧ ಏಳು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…