ಕ್ರೀಡೆ

ಭಾರತಕ್ಕೆ ಸೋಲಿನ ರುಚಿ ತೋರಿಸಿದ ದಕ್ಷಿಣ ಆಫ್ರಿಕಾ

  ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ.


ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ಗಳು ಆರಂಭದಲ್ಲಿಯೇ ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. ಒಂಬತ್ತು ರನ್‌ ಗಳಿಸಿ ರಾಹುಲ್‌ ನಿರ್ಗಮಿಸಿದರೆ ರೋಹಿತ್ ಶರ್ಮಾ15 ರನ್ಗೆ ಲುಂಗಿ ಎನ್ಗಿಡಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಕೇವಲ 12 ರನ್ ಗಳಿಗೆ ಕೋಹ್ಲಿ ನಿರ್ಗಮಿಸಿದರೆ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ (68) ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಸಹಿತ ನಂತರ ಬಂದ ಯಾರೊಬ್ಬರೂ ಎರಡಂಕಿ ದಾಟಲಿಲ್ಲ.
ಡೇವಿಡ್ ಮಿಲ್ಲರ್ ಮತ್ತುಏಡೆನ್ ಮಕ್ರಮ್ ಅರ್ಧ ಶತಕ ಬಾರಿಸಿ ದ. ಆಫ್ರಿಕಾದ ಗೆಲುವನ್ನು ಸುಗಮವಾಗಿಸಿದರು. ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago