ಕ್ರೀಡೆ

ಇಂದು ಭಾರತ ಆಸ್ಟ್ರೇಲಿಯಾ ಟಿ20 ದ್ವಿತೀಯ ಪಂದ್ಯ ನಡೆಯುವುದೇ?

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

andolana

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

42 mins ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

11 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

14 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

14 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

14 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

14 hours ago