ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.
4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.
ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್‌ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್‌ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.
ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.
ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…