ಗ್ವಾಲಿಯರ್: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಗಿ ಭಾರತಕ್ಕೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್‌ಗಳಲ್ಲಿ ಬೆನ್ನಟ್ಟಿದ ಟೀಮ್ ಇಂಡಿಯಾ 132 ರನ್ ದಾಖಲಿಸಿತು.
ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್ ಹೊಸೈನ್ 8 ರನ್ ಮತ್ತು ಲಿಟನ್ ದಾಸ್ 4 ರನ್ ಗಳಿಸಿದರು. ಇನ್ನುಳಿದಂತೆ ತೌಹಿದ್ ಹೃದೊಯ್ 12, ಮಹ್ಮದ್ದುಲ್ಲಾ 1, ಜಾಕೀರ್ ಅಲಿ 8, ನಾಯಕ ನಜ್ಮುಲ್ ಹೊಸೈನ್ ಶಾಂತೊ 27, ರಿಷದ್ ಹೊಸೈನ್ 11, ಟಸ್ಕಿನ್ ಅಹ್ಮದ್ 12, ಶೊರಿಫುಲ್ ಇಸ್ಲಾಂ 0, ಮುಸ್ತಫಿಜರ್ ರಹಮಾನ್ 1 ಮತ್ತು ಮೆಹಿಡಿ ಹಸನ್ ಅಜೇಯ 35 ರನ್ ಗಳಿಸಿದರು.
ಭಾರತದ ಪರ ಅರ್ಷ್‌ದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್, ಮಯಾಂಕ್ ಯಾದವ್, ವಾಷಿಂಗ್ಟನ್ ಸುಂದರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತ ಇನ್ನಿಂಗ್ಸ್: ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 29 (19) ರನ್ ಮತ್ತು ಅಭಿಷೇಕ್ ಶರ್ಮಾ 16 (7) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 29 (14) ರನ್, ನಿತೀಶ್ ರೆಡ್ಡಿ ಅಜೇಯ 16 (15) ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 39 (16) ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬಾಂಗ್ಲಾ ಪರ ಮುಸ್ತಫಿಜರ್ ರಹಮಾನ್ ಹಾಗೂ ಮೆಹಿಡಿ ಹಸನ್ ತಲಾ ಒಂದೊಂದು ವಿಕೆಟ್ ಪಡೆದರು.