ಗ್ವಾಲಿಯರ್: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಗಿ ಭಾರತಕ್ಕೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್‌ಗಳಲ್ಲಿ ಬೆನ್ನಟ್ಟಿದ ಟೀಮ್ ಇಂಡಿಯಾ 132 ರನ್ ದಾಖಲಿಸಿತು.
ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್ ಹೊಸೈನ್ 8 ರನ್ ಮತ್ತು ಲಿಟನ್ ದಾಸ್ 4 ರನ್ ಗಳಿಸಿದರು. ಇನ್ನುಳಿದಂತೆ ತೌಹಿದ್ ಹೃದೊಯ್ 12, ಮಹ್ಮದ್ದುಲ್ಲಾ 1, ಜಾಕೀರ್ ಅಲಿ 8, ನಾಯಕ ನಜ್ಮುಲ್ ಹೊಸೈನ್ ಶಾಂತೊ 27, ರಿಷದ್ ಹೊಸೈನ್ 11, ಟಸ್ಕಿನ್ ಅಹ್ಮದ್ 12, ಶೊರಿಫುಲ್ ಇಸ್ಲಾಂ 0, ಮುಸ್ತಫಿಜರ್ ರಹಮಾನ್ 1 ಮತ್ತು ಮೆಹಿಡಿ ಹಸನ್ ಅಜೇಯ 35 ರನ್ ಗಳಿಸಿದರು.
ಭಾರತದ ಪರ ಅರ್ಷ್‌ದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್, ಮಯಾಂಕ್ ಯಾದವ್, ವಾಷಿಂಗ್ಟನ್ ಸುಂದರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತ ಇನ್ನಿಂಗ್ಸ್: ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 29 (19) ರನ್ ಮತ್ತು ಅಭಿಷೇಕ್ ಶರ್ಮಾ 16 (7) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 29 (14) ರನ್, ನಿತೀಶ್ ರೆಡ್ಡಿ ಅಜೇಯ 16 (15) ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 39 (16) ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬಾಂಗ್ಲಾ ಪರ ಮುಸ್ತಫಿಜರ್ ರಹಮಾನ್ ಹಾಗೂ ಮೆಹಿಡಿ ಹಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ…
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ…
ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು…
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ…