ಕ್ರೀಡೆ

ಭಾರತದಲ್ಲಿ ವರ್ಲ್ಡ್‌ಕಪ್‌ ಗೆಲ್ಲುತ್ತೇವೆಂಬ ವಿಶ್ವಾಸವಿದೆ: ಕಗಿಸೊ ರಬಾಡ

ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್‌ 5 ರಿಂದ ನವೆಂಬರ್ 19ರವರೆಗೆ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಭಾರತಕ್ಕೆ ಆಗಮಿಸಿವೆ. ಅದರಂತೆ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕೂಡ ಭಾರತಕ್ಕೆ ಆಗಮಿಸಿದೆ. ಮಹತ್ವದ ಟೂರ್ನಿಯ ಸಲುವಾಗಿ ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ, ಈ ಬಾರಿ ನಾವು ಚೊಚ್ಚಲ ಏಕದಿನ ವಿಶ್ವಕಪ್‌ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗ್ರೇಮ್ ಸ್ಮಿತ್‌, ಹಾಶಿಮ್‌ ಆಮ್ಲಾ, ಎಬಿ ಡಿ ವಿಲಿಯರ್ಸ್, ಫಾಫ್‌ ಡು ಪ್ಲೆಸಿಸ್‌ ಸೇರಿದಂತೆ ಘಟಾನುಘಟಿ ಆಟಗಾರರು ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದರೂ ಒಂದೇ ಒಂದು ಬಾರಿ ಕೂಡ ವಿಶ್ವಕಪ್‌ ಗೆಲ್ಲಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ.

ಈ ಬಾರಿ ಚೊಚ್ಚಲ ಪ್ರಶಸ್ತಿ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸವಿದೆ: ರಬಾಡ

ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ,” ದಕ್ಷಿಣ ಆಫ್ರಿಕಾದವರಿಗೆ ಎಂದಿಗೂ ನಂಬಿಕೆಯ ಕೊರತೆ ಇರುವುದಿಲ್ಲ. ಈ ಬಾರಿ ಏಕದಿನ ವಿಶ್ವಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ನಾವು ಟೂರ್ನಿಗೆ ತೆರಳುತ್ತಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಮ್ಮ ತಂಡ ಅತ್ಯುತ್ತಮ ಆಟಗಾರರೊಂದಿಗೆ ಬಲಿಷ್ಠವಾಗಿದೆ. ಆದ್ದರಿಂದ ನಾವು ಈ ಬಾರಿ ಮೊದಲ ಬಾರಿ ಫೈನಲ್‌ಗೆ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದೇವೆ. ಈ ಹಾದಿ ಕಠಿಣವಾಗಿದ್ದರೂ, ಇದನ್ನು ನಾವು ಆನಂದಿಸುತ್ತೇವೆ. ಒಂದು ಪ್ರಶಸ್ತಿಗೆ ವಿಶ್ವದ ಅತ್ಯುತ್ತಮ ಆಟಗಾರರ ವಿರುದ್ಧ ಕಾದಾಟ ನಡೆಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ನಾವು ಸವಾಲನ್ನು ಸ್ವೀಕರಿಸುತ್ತೇವೆ,” ಎಂದು ಕಗಿಸೊ ರಬಾಡ ತಿಳಿಸಿದ್ದಾರೆ.

2019ರಲ್ಲಿ ವಿಫಲವಾಗಿದ್ದ ದಕ್ಷಿಣ ಆಫ್ರಿಕಾ ತಂಡ : ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ನಾಲ್ಕು ಬಾರಿ ಸೆಮಿಫೈನಲ್‌ ತಲುಪಿರುವ ದಕ್ಷಿಣ ಆಫ್ರಿಕಾ ತಂಡ 2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಲೀಗ್‌ ಹಂತಂದಿಂದಲೇ ಹೊರ ಬಿದ್ದಿತ್ತು. ಪ್ರಸ್ತುತ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ತಂಡದ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿತ್ತು.

ನಾಲ್ಕು ವರ್ಷಗಳ ಹಿಂದೆ ಕಗಿಸೊ ರಬಾಡ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ತೆಂಬಾ ಬವೂಮ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ರಬಾಡ ಪ್ರತಿನಿಧಿಸಲಿದ್ದಾರೆ.
ಏಕದಿನ ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ: ತೆಂಬಾ ಬವೂಮ (ನಾಯಕ), ಗೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯೆನ್ಸನ್, ಹೆನ್ರಿಕ್ ಕ್ಲಾಸೆನ್, ಸಿಸಂಡ ಮಗಾಲಾ, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಎರ್ನಿಕ್‌ ನೊರ್ಕಿಯಾ, ಕಗಿಸೊ ರಬಾಡ, ತಬ್ರೈಜ್‌ ಶಾಮ್ಸಿ .
andolanait

Recent Posts

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

12 mins ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

29 mins ago

ಕರ್ತವ್ಯ ಮುಗಿಸಿ ಮನೆಗೆ ಬಂದಾಗಲೇ ಹೃದಯಾಘಾತ: ಎಎಸ್‌ಐ ಸಾವು

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

1 hour ago

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

1 hour ago

ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್:‌ ಕಾರಣ ಇಷ್ಟೇ

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌…

2 hours ago

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…

2 hours ago