ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 5 ರಿಂದ ನವೆಂಬರ್ 19ರವರೆಗೆ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಭಾರತಕ್ಕೆ ಆಗಮಿಸಿವೆ. ಅದರಂತೆ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕೂಡ ಭಾರತಕ್ಕೆ ಆಗಮಿಸಿದೆ. ಮಹತ್ವದ ಟೂರ್ನಿಯ ಸಲುವಾಗಿ ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ, ಈ ಬಾರಿ ನಾವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗ್ರೇಮ್ ಸ್ಮಿತ್, ಹಾಶಿಮ್ ಆಮ್ಲಾ, ಎಬಿ ಡಿ ವಿಲಿಯರ್ಸ್, ಫಾಫ್ ಡು ಪ್ಲೆಸಿಸ್ ಸೇರಿದಂತೆ ಘಟಾನುಘಟಿ ಆಟಗಾರರು ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದರೂ ಒಂದೇ ಒಂದು ಬಾರಿ ಕೂಡ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ.
ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ,” ದಕ್ಷಿಣ ಆಫ್ರಿಕಾದವರಿಗೆ ಎಂದಿಗೂ ನಂಬಿಕೆಯ ಕೊರತೆ ಇರುವುದಿಲ್ಲ. ಈ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದೊಂದಿಗೆ ನಾವು ಟೂರ್ನಿಗೆ ತೆರಳುತ್ತಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನಮ್ಮ ತಂಡ ಅತ್ಯುತ್ತಮ ಆಟಗಾರರೊಂದಿಗೆ ಬಲಿಷ್ಠವಾಗಿದೆ. ಆದ್ದರಿಂದ ನಾವು ಈ ಬಾರಿ ಮೊದಲ ಬಾರಿ ಫೈನಲ್‌ಗೆ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದೇವೆ. ಈ ಹಾದಿ ಕಠಿಣವಾಗಿದ್ದರೂ, ಇದನ್ನು ನಾವು ಆನಂದಿಸುತ್ತೇವೆ. ಒಂದು ಪ್ರಶಸ್ತಿಗೆ ವಿಶ್ವದ ಅತ್ಯುತ್ತಮ ಆಟಗಾರರ ವಿರುದ್ಧ ಕಾದಾಟ ನಡೆಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ನಾವು ಸವಾಲನ್ನು ಸ್ವೀಕರಿಸುತ್ತೇವೆ,” ಎಂದು ಕಗಿಸೊ ರಬಾಡ ತಿಳಿಸಿದ್ದಾರೆ.
2019ರಲ್ಲಿ ವಿಫಲವಾಗಿದ್ದ ದಕ್ಷಿಣ ಆಫ್ರಿಕಾ ತಂಡ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನಾಲ್ಕು ಬಾರಿ ಸೆಮಿಫೈನಲ್ ತಲುಪಿರುವ ದಕ್ಷಿಣ ಆಫ್ರಿಕಾ ತಂಡ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತಂದಿಂದಲೇ ಹೊರ ಬಿದ್ದಿತ್ತು. ಪ್ರಸ್ತುತ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ತಂಡದ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿತ್ತು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…