ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ.
ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು 58 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಆಗ ಅದು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸಿಂಗ್ ದಾಖಲೆಯಾಗಿತ್ತು. ಆದರೆ, ಈಗ ಆಟದ ಸ್ವರೂಪ ಬದಲಾಗಿದೆ. ಕ್ರೀಡೆ ಬಹಳ ದೂರ ಸಾಗಿದೆ. ಬೃಹತ್ ಗುರಿಗಳನ್ನು ಬೆನ್ನಟ್ಟುವ ಸಾಮರ್ಥ್ಯವು ಇದೀಗ ಹಲವು ತಂಡಗಳಲ್ಲಿ ಕಾಣಿಸುತ್ತಿದೆ.
ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ. ಅತ್ಯಧಿಕ ಯಶಸ್ವಿ ಚೇಸಿಂಗ್ ದಾಖಲೆಯನ್ನು ಮೊದಲು ಆಸ್ಟ್ರೇಲಿಯಾ ಹೊಂದಿತ್ತು. ಇದೀಗ ಭಾರತ ಅತ್ಯಧಿಕ್ ಚೇಸ್ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
ಇದನ್ನು ಓದಿ: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಘೋಷಣೆ
ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್
* 2025ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದಿದೆ
* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 331 ರನ್ ಚೇಸ್ ಮಾಡಿ ಗೆದ್ದಿದೆ
* 2024ರಲ್ಲಿ ಶ್ರೀಲಂಕಾ ದಕ್ಷಿಣ ಆಫ್ರಿಕಾ ವಿರುದ್ಧ 302 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ
* 2012ರಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 289 ರನ್ ಚೇಸ್ ಮಾಡಿ ಗೆದ್ದಿದೆ
* 2023ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 283 ರನ್ ಚೇಸ್ ಮಾಡಿ ಗೆದ್ದಿದೆ
* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 282 ರನ್ ಚೇಸ್ ಮಾಡಿ ಗೆದ್ದಿದೆಭಾರತ ಅತ್ಯಧಿಕ ಯಶಸ್ವಿ ಚೇಸ್
2025ರ ಅಕ್ಟೋಬರ್ 30 ರಂದು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಮಹಿಳಾ ODI ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ 339 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಭಾರತದ ದಾಖಲೆ ಅಷ್ಟೇ ಅಲ್ಲ, ಮಹಿಳಾ ODI ಇತಿಹಾಸದಲ್ಲಿ ತಂಡವೊಂದರ ಅತ್ಯಧಿಕ ಯಶಸ್ವಿ ಚೇಸ್ ಆಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…