ಕ್ರೀಡೆ

ಗೆಲುವಿನೊಂದಿಗೆ ದಾಖಲೆ ಬರೆದ ಭಾರತ : ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ.

ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು 58 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಆಗ ಅದು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸಿಂಗ್ ದಾಖಲೆಯಾಗಿತ್ತು. ಆದರೆ, ಈಗ ಆಟದ ಸ್ವರೂಪ ಬದಲಾಗಿದೆ. ಕ್ರೀಡೆ ಬಹಳ ದೂರ ಸಾಗಿದೆ. ಬೃಹತ್ ಗುರಿಗಳನ್ನು ಬೆನ್ನಟ್ಟುವ ಸಾಮರ್ಥ್ಯವು ಇದೀಗ ಹಲವು ತಂಡಗಳಲ್ಲಿ ಕಾಣಿಸುತ್ತಿದೆ.

ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ. ಅತ್ಯಧಿಕ ಯಶಸ್ವಿ ಚೇಸಿಂಗ್ ದಾಖಲೆಯನ್ನು ಮೊದಲು ಆಸ್ಟ್ರೇಲಿಯಾ ಹೊಂದಿತ್ತು. ಇದೀಗ ಭಾರತ ಅತ್ಯಧಿಕ್ ಚೇಸ್ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಇದನ್ನು ಓದಿ: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಘೋಷಣೆ

ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

* 2025ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 331 ರನ್ ಚೇಸ್ ಮಾಡಿ ಗೆದ್ದಿದೆ

* 2024ರಲ್ಲಿ ಶ್ರೀಲಂಕಾ ದಕ್ಷಿಣ ಆಫ್ರಿಕಾ ವಿರುದ್ಧ 302 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ

* 2012ರಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 289 ರನ್ ಚೇಸ್ ಮಾಡಿ ಗೆದ್ದಿದೆ

* 2023ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 283 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 282 ರನ್ ಚೇಸ್ ಮಾಡಿ ಗೆದ್ದಿದೆಭಾರತ ಅತ್ಯಧಿಕ ಯಶಸ್ವಿ ಚೇಸ್

2025ರ ಅಕ್ಟೋಬರ್ 30 ರಂದು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಮಹಿಳಾ ODI ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ 339 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಭಾರತದ ದಾಖಲೆ ಅಷ್ಟೇ ಅಲ್ಲ, ಮಹಿಳಾ ODI ಇತಿಹಾಸದಲ್ಲಿ ತಂಡವೊಂದರ ಅತ್ಯಧಿಕ ಯಶಸ್ವಿ ಚೇಸ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

9 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

10 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

10 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

11 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

14 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

19 hours ago